ಬೆಂಗಳೂರು: ಕಳೆದ 10 ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಎರೋಟಿಕ್ ವಾಲ್ವ್ ಅಳವಡಿಕೆ ಹಿನ್ನೆಲೆಯಲ್ಲಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಎಚ್ಡಿ ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆ ಸಂಬಂಧ ಸೆಪ್ಟೆಂಬರ್ 23 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಡಾ. ಸತ್ಯಕೀ ಹಾಗೂ ಡಾ.ಮಂಜುನಾಥ ಅವರ ನೇತೃತ್ವದಲ್ಲಿ ಆಪರೇಷನ್ ನಡೆದಿತ್ತು.
Advertisement
ಇನ್ನು 10ನೇ ದಿನ ಡಿಸ್ಚಾರ್ಜ್ ಆಗುವುದಕ್ಕೆ ವೈದ್ಯರು ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಎಚ್ಡಿಕೆ ಗುಣಮುಖರಾಗಲೆಂದು ದೇವರ ಮೊರೆ ಹೋಗಿದ್ದ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ದೇವಾಲಯ, ಚರ್ಚ್ ಹಾಗೂ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದರು.