ಇದೇ ಮೊದಲ ಬಾರಿಗೆ ಪ್ರಜ್ವಲ್‌ ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ

Public TV
1 Min Read
hd revanna

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಭೇಟಿ ಮಾಡಲು ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ (Parappana Agrahara) ಆಗಮಿಸಿದ್ದಾರೆ.

ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಈಗ ಜೈಲಿನ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದಾರೆ. ಸೋಮವಾರ ಭವಾನಿ ರೇವಣ್ಣ (Bhavani Revanna) ಮಗನನ್ನು ನೋಡಲು ಬಂದಿದ್ದರು. ಈಗ ಮಗನನ್ನು ನೋಡಲು ಹೆಚ್‌ಡಿ ರೇವಣ್ಣ ಆಗಮಿಸಿದ್ದಾರೆ.

 

ಮಂಗಳವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ರೇವಣ್ಣ, ನಾನು ಸದ್ಯಕ್ಕೆ ಪ್ರಜ್ವಲ್ (Prajwal Revanna) ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೆ ಕೊಟ್ಟ ಅಂತಾ ಹೇಳುತ್ತಾರೆ. ಹೀಗಾಗಿ ನಾನು ಹೋಗಲ್ಲ ಎಂದಿದ್ದರು. ಇದನ್ನೂ ಓದಿ: ಇನ್ಮುಂದೆ ಹಳದಿ ಹಕ್ಕಿಯ ಚಿಲಿಪಿಲಿ ಕೇಳಲ್ಲ – ಬಾಗಿಲು ಹಾಕಿತು ಕೂ

ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಎಂದು ಮಾತು ಆರಂಭಿಸಿದ್ದ ಅವರು, ಸೋಮವಾರ ನನ್ನ ಪತ್ನಿ ಹೋಗಿದ್ದಾರೆ. ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ-ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ ಎಂದು ಪ್ರತಿಕ್ರಿಯಿಸಿದ್ದರು.

ಎಂತೆಂಥವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು (HD Devegowda) ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದು ಹೇಳಿದ್ದರು.

 

Share This Article