ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದೇ ಕೊನೆ ದಿನವಾಗಿದ್ದು, ಇದೀಗ ರಾಜ್ಯದಲ್ಲಿ ರಾಜಕೀಯ ಚದುರಂಗದಾಟ ಪ್ರಾರಂಭವಾಗಿದೆ. ಕಾಂಗ್ರೆಸ್ ಬೆಂಬಲ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕೇಳಿರುವುದು ಮಹತ್ವದ ತಿರುವು ಪಡೆದುಕೊಂಡಿದೆ.
ಈ ಬಗ್ಗೆ ಮಾತನಾಡಿ, ನಮ್ಮ ಬಳಿ 32 ವೋಟ್ ಇದೆ. ಈಗ ಮೊದಲ ಪ್ರಾಶಸ್ತ್ಯ 32 ಇದೆ. ಎರಡೂ ರಾಷ್ಟ್ರೀಯ ಪಕ್ಷ ಇದೆ. ಅದರಲ್ಲಿ ಒಂದು ಕೋಮುವಾದಿ ಪಕ್ಷವಾದರೆ ಮತ್ತೊಂದು ಕೋಮುವಾದ ವಿರುದ್ಧ ಇರುವ ರಾಷ್ಟ್ರೀಯ ಪಕ್ಷವಾಗಿದೆ ಎಂದು ತಿಳಿಸಿದರು.
Advertisement
Advertisement
ನಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ್ದೇವೆ. ಈ ಹಿನ್ನೆಲೆಯಲ್ಲಿ ನಮ್ಮ ಅಭ್ಯರ್ಥಿ ಬೆಂಬಲಿಸಲು ಸೋನಿಯಾಗಾಂಧಿ ಜೊತೆ ಚರ್ಚೆ ಮಾಡಿದ್ದೇವೆ. ಕುಪೇಂದ್ರ ರೆಡ್ಡಿ ಕೂಡ ಡಿಕೆಶಿ ಅವರನ್ನ ಭೇಟಿ ಮಾಡಿದ್ದಾರೆ. ರಾಮಲಿಂಗಾರೆಡ್ಡಿ ಎಲ್ಲರನ್ನೂ ಭೇಟಿ ಮಾಡಿದ್ದರು. ಅಷ್ಟೇ ಅಲ್ಲದೇ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಅವಕಾಶ ಕೇಳಿದ್ದೇವೆ ಎಂದರು.
Advertisement
Advertisement
ಶುಕ್ರವಾರವೇ ಸೋನಿಯಾ ಗಾಂಧಿ ಜೊತೆ ದೇವೇಗೌಡರು ಮಾತನಾಡಿದ್ದರು. ಆದರೆ ನಿನ್ನೆ ಕಾಂಗ್ರೆಸ್ ದಿಢೀರ್ ಅಂತ ಮತ ಇಲ್ಲದಿದ್ದರೂ ಎರಡನೇ ಅಭ್ಯರ್ಥಿಯನ್ನು ಹಾಕಿದ್ದಾರೆ. ಅವರಿಗೆ ಮತ ಇಲ್ಲದಿದ್ದರೂ ಹಾಕಿದ್ದಾರೆ. ಆದರೂ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಅವರಿಗೂ ಮನವಿ ಮಾಡುತ್ತೇನೆ. ಪ್ರಾದೇಶಿಕ ಪಕ್ಷವನ್ನ ಬೆಂಬಲಿಸಿ, ಕೋಮುವಾದ ಪಕ್ಷವನ್ನ ದೂರ ಇಡಲು ಕಾಂಗ್ರೆಸ್ ನಮ್ಮನ್ನ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್ ಪಟೇಲ್ ಶೀಘ್ರವೇ ಬಿಜೆಪಿಗೆ ಸೇರ್ಪಡೆ?
ನಾವು ಜೆಡಿಎಸ್ ಬೆಂಬಲ ಕೇಳುವುದಿಲ್ಲ. ನಾವು ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ನೇರವಾಗಿ ಹೇಳಿದ್ದರು. ಈಗ ಜೆಡಿಎಸ್ ಅಭ್ಯರ್ಥಿಯನ್ನು ಇಳಿಸಿದ್ದರಿಂದ ಕಾಂಗ್ರೆಸ್ ಬೆಂಬಲ ನೀಡುತ್ತಾ? ಅಥವಾ ಜೆಡಿಎಸ್‍ನವರು ಅಡ್ಡ ಮತದಾನ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಟಿಕಾಯತ್‌ಗೆ ಮಸಿː ಒಳಗಡೆ ಮೋದಿಗೆ ಜೈ ಜೈ, ಹೊರಗಡೆ ಡೌನ್ ಡೌನ್ ಅಂದ್ರು