ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರು ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಸಂತ್ರಸ್ತೆ ಮಡಿಕೇರಿಯಲ್ಲಿರುವ (Madikeri) ಅನುಮಾನ ವ್ಯಕ್ತವಾಗಿದೆ.
ಜಾಮೀನು ಅರ್ಜಿ ವಿಚಾರಣೆ ನಡುವೆಯೇ ಕೆ.ಆರ್.ನಗರ ಮಹಿಳೆಯ ಹುಡುಕಾಟ ಚುರುಕಾಗಿದೆ. ಮಹಿಳೆಯನ್ನು ಅಪಹರಿಸಿ ಎಲ್ಲಿ ಇಟ್ಟಿರಬಹುದು ಎಂಬ ವಿಚಾರದಲ್ಲಿ ತನಿಖೆ ಚುರುಕುಗೊಂಡಿದೆ.
ಇತ್ತ ಮಹಿಳೆಯನ್ನು ಜೆಡಿಎಸ್ ನಾಯಕರೊಬ್ಬರ ಮಡಿಕೇರಿಯ ತೋಟದ ಮನೆಯಲ್ಲಿ ಅಡಗಿಸಿ ಇಟ್ಟಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿಯ ಫಾರ್ಮ್‍ಹೌಸ್ ನ ಮಾಹಿತಿ ಮೇರೆಗೆ ಮಡಿಕೇರಿಯಲ್ಲಿ ಪೊಲೀಸರು ತಲಾಶ್ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್ ಕೇಸ್ ವಿಚಾರದಲ್ಲಿ ದೇವೇಗೌಡರು ಸಾಕಷ್ಟು ನೊಂದಿದ್ದಾರೆ: ನಿಖಿಲ್ ಕುಮಾರಸ್ವಾಮಿ
ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ರೇವಣ್ಣ ವಿರುದ್ಧ ಸಂತ್ರಸ್ತೆ ಮಗ ದೂರು ದಾಖಲಿಸಿದ್ದರು. ಸಂತ್ರಸ್ತೆ ಪುತ್ರ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿದ್ದರು. ದೂರಿನಲ್ಲಿ ಭವಾನಿ ಅಕ್ಕ ಕರೆಯುತ್ತಿದ್ದಾರೆ ಅಂತ ಬಾಬಣ್ಣ ಎಂಬಾತ ಮನೆಗೆ ಬಂದು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಪೊಲೀಸರು ಕೇಳಿದರೆ ನಮಗೇನು ಗೊತ್ತಿಲ್ಲ ಎಂದು ಹೇಳಿದ್ರು. ಬಳಿಕ ಪೊಲೀಸರ ಮೇಲೆಯೂ ಒತ್ತಡ ಹಾಕಿದ್ರು ಅಂತ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಎ2 ಆರೋಪಿ ಸತೀಶ್ ಬಾಬಣ್ಣನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇತ್ತ ಎ1 ಆರೋಪಿ ಹೆಚ್.ಡಿ ರೇವಣ್ಣ ಕೋರ್ಟ್ ಮೊರೆ ಹೋಗಿದ್ದು, ಇಂದು ಜನಪ್ರತಿನಿಧಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ.