ತಪ್ಪು ಮಾಡಿದ್ದರೆ ಸೂರಜ್ ಯಾಕೆ ದೂರು ಕೊಡೋಕೆ ಹೋಗ್ತಿದ್ರು? – ಹೆಚ್‌.ಡಿ ರೇವಣ್ಣ ಪ್ರಶ್ನೆ

Public TV
2 Min Read
HD Revanna 1

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿನಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಪರ ತಂದೆ ಹಾಗೂ ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಬ್ಯಾಟ್‌ ಬೀಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ ಅವರು, ನಮ್ಮ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡ್ತಿದ್ದಾರೆ. ಹಾಸನದಲ್ಲಿ ಮೆಡಿಕಲ್ ಟೆಸ್ಟ್‌ (Medical Test) ಮಾಡಿಸದೇ ಬೆಂಗಳೂರಿಗೆ ಯಾಕೆ ಕರೆತಂದ್ರು? ಇದೇಲ್ಲ ನಮ್ಮನ್ನ ಹೆದರಿಸೋಕೆ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏಕದಿನ ವಿಶ್ವಕಪ್‌ ಸೋಲಿನ ಸೇಡು – ಬಲಿಷ್ಠ ಆಸೀಸ್‌ ವಿರುದ್ಧ ಅಫ್ಘಾನ್‌ಗೆ ಐತಿಹಾಸಿಕ ಗೆಲುವು!

SURAJ REVANNA 1

ಸೂರಜ್ ರೇವಣ್ಣ (Suraj Revanna) ಮೊದಲು ದೂರು ಕೊಟ್ಟಿರೋದು. ದೂರು ಕೊಟ್ಟ ಮೇಲೆ ಏನ್‌ ಮಾಡಿದ್ದಾರೆ. ತಪ್ಪು ಮಾಡಿದ್ರೇ ಸೂರಜ್ ಯಾಕೆ ದೂರು ಕೊಡೋಕೆ ಹೋಗ್ತಿದ್ರು? ಈಗ ಏನೂ ಹೇಳಲ್ಲ. ಟೈಂ ಬಂದಾಗ ಹೇಳ್ತೀನಿ. ನಾವು ತಪ್ಪು ಮಾಡಿದ್ರೇ ಓಡಿ ಹೋಗ್ತಿದ್ವಿ, ನಮ್ಮ ಕುಟುಂಬವನ್ನ ಯಾರು ಟಾರ್ಗೆಟ್ ಮಾಡ್ತಿದ್ದಾರೆ? ಅವೇಲ್ಲವನ್ನು ದೇವರಿಗೆ ಬಿಡ್ತೀನಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೋ ಹ್ಯಾಟ್ರಿಕ್‌ ಸಾಧನೆ – `ಪುಷ್ಪಕ್ʼ ಸೇಫ್‌ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿ!

Suraj Revanna 2

ಪೊಲೀಸರಿಗೆ ಸೂರಜ್‌ ಲಾಕ್‌ ಆಗಿದ್ದು ಹೇಗೆ?
ತನ್ನ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಸಂತ್ರನ ವಿರುದ್ಧ ಪ್ರತಿದೂರು ನೀಡಲು ಶನಿವಾರ ಸಂಜೆ 6 ಗಂಟೆ ವೇಳೆಗೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ತೆರಳಿದ್ದರು. ಅಲ್ಲಿಯೇ ಅವರನ್ನು ವಶಕ್ಕೆ ಪಡೆದ ಪೊಲೀಸರು ರಾತ್ರಿ ಸುಮಾರು 11:30ರ ವರೆಗೂ ವಿಚಾರಣೆ ನಡೆಸಿದ್ದರು. ಬಳಿಕ ಸೂರಜ್‌ ಜೊತೆಗೆ ನಿಗೂಢ ಸ್ಥಳಕ್ಕೆ ತೆರಳಿದ್ದ ಪೊಲೀಸರು ತಡರಾತ್ರಿ 1:30ರ ವರೆಗೂ ವಿಚಾರಣೆ ಮುಂದುವರಿಸಿದ್ದರು.

ಪ್ರಕರಣದ ತನಿಖಾಧಿಕಾರಿ ಆಗಿರುವ ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌ ಅವರು ಸೂರಜ್‌ ರೇವಣ್ಣ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಬೆಳಗ್ಗಿನ ಜಾವ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಸದ್ಯ ಅವರಿಗೆ ವೈದ್ಯಕೀಯ ಪರೀಕ್ಷೆ ಮುಗಿದ ಬಳಿಕ ಸಂಜೆ 4 ಗಂಟೆ ವೇಳೆಗೆ ಜಡ್ಜ್‌ ಮುಂದೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಸಂತ್ರಸ್ತನಿಗಿಂದು ಬೆಂಗ್ಳೂರಲ್ಲಿ ಮೆಡಿಕಲ್‌ ಟೆಸ್ಟ್‌!

Share This Article