ನವದೆಹಲಿ: ಕಾಂಗ್ರೆಸ್ ಸೋಲಿಗೆ ಜೆಡಿಎಸ್ ಕಾರಣ ಅಲ್ಲ. ಮಂಡ್ಯದಲ್ಲಿ ಏನೆಲ್ಲ ನಡೆಯಿತು ಎಂದು ಗೊತ್ತಿದೆಯಲ್ಲ. ಬೆಳಗಾವಿ, ಚಿಕ್ಕೋಡಿ, ಕೊಪ್ಪಳ ಬಾಗಲಕೋಟೆ ಸೋಲಿಗೆ ನಾವು ಜವಾಬ್ದಾರಿನಾ ಎಂದು ಪ್ರಶ್ನಿಸುವ ಮೂಲಕ ಸಚಿವ ಎಚ್.ಡಿ ರೇವಣ್ಣ ಅವರು ಕಾಂಗ್ರೆಸ್ ಗೆ ಗುದ್ದು ಕೊಟ್ಟಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೋಲಿಸಲು ಈ ಜಿಲ್ಲೆಗಳಲ್ಲಿ ಒಕ್ಕಲಿಗರು ಇದ್ದಾರೆಯಾ ಎಂದು ಪ್ರಶ್ನಿಸುವ ಮೂಲಕ ಮಂಡ್ಯದಲ್ಲಿ ಜೆಡಿಎಸ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.
ಯಡಿಯೂರಪ್ಪ ಮಾಡಿದ್ದೇನು ಎಂದು ಮತ್ತೆ ಪ್ರಶ್ನಿಸಿದ ರೇವಣ್ಣ, ಬಹುಮತ ಇಲ್ಲದೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ದೇವೇಗೌಡರು ರಾಜಕೀಯದಲ್ಲಿ ಎಲ್ಲವನ್ನು ನೋಡಿದ್ದಾರೆ. ಹಿಂದೆ ಅವರು ಲೋಕಸಭೆಯಲ್ಲಿ ಸೋತಿದ್ದರು. ಅದಾದ ಮೇಲೆ ಗೆದ್ದು ಸಿಎಂ ಕೂಡ ಆಗಿದ್ದರು. ಯಾವುದು ಏನೂ ಆಗಲ್ಲ ಎಂದು ಅವರು ತಿಳಿಸಿದರು.
ಇದೇ ವೇಳೆ ಮಧ್ಯಂತರ ಚುನಾವಣೆಯ ಬಗ್ಗೆ ಎಚ್‍ಡಿಡಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಅಧ್ಯಕ್ಷರ ಹೇಳಿಕೆಯ ಉದ್ದೇಶ ನಮಗೆ ಗೊತ್ತಿಲ್ಲ. ಅದನ್ನು ತಿಳಿದುಕೊಂಡು ಮಾತನಾಡುತ್ತೇನೆ. ಅವರು ಯಾವ ಆಂಗಲ್ ನಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ. ಮಧ್ಯಂತರ ಚುನಾವಣೆ ಬಗ್ಗೆ ನನಗೆ ಗೊತ್ತಿಲ್ಲ. ರಾಷ್ಟ್ರೀಯ ಅಧ್ಯಕ್ಷರ ನಿರ್ದೇಶನದಂತೆ ನಾವು ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡೋ ವಿಚಾರ ಚರ್ಚೆಗೆ ಬಂದಿಲ್ಲ, ಅದು ನನಗೆ ಗೊತ್ತಿಲ್ಲ ಎಂದರು.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]