ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ರೇವಣ್ಣ ಪರ ವಾದ ಮಂಡಿಸಿದ ವಕೀಲರು, ಬಲವಂತದ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದರು.
ಎಸ್ಐಟಿ ಪರವಾಗಿ ಎಸ್ಪಿಪಿ ಜಗದೀಶ್ ವಾದ ಮಂಡಿಸಿ, ಸೆಕ್ಷನ್ 376 ಸೇರ್ಪಡೆ ಮಾಡಿಲ್ಲ. 376 ಅಲ್ಲದೆ ಬೇರೆ ಯಾವುದು ನಾನ್ ಬೇಲೆಬಲ್ ಸೆಕ್ಷನ್ ಹಾಕಲ್ಲ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದರು.
ರೇವಣ್ಣ ಅವರು ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದರು. ಈ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ