ಹಾಸನ: ಮಾಜಿ ಸಚಿವ ಹೆಚ್‍ಡಿ ರೇವಣ್ಣ ಅಭಿಮಾನಿಗಳತ್ತ ನಿಂಬೆ ಹಣ್ಣು ಉರುಳಿಸಿದ್ದಾರೆ.
ಅರಸೀಕೆರೆ ತಾಲೂಕಿನ ನಾಗರಹಳ್ಳಿ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ರೇವಣ್ಣ ವೇದಿಕೆ ಮೇಲಿಂದ ನಿಂಬೆ ಹಣ್ಣು ಉರುಳಿಸಿದ್ದಾರೆ.
ಮೊದಲಿಗೆ ಅರಸೀಕೆರೆ ಶಾಸಕ ಶಿವಲಿಂಗೇಗೌಡ ರೆವಣ್ಣ ಅವರಿಗೆ ನಿಂಬೆ ಹಣ್ಣು ಕೊಟ್ಟು ತಮಾಷೆ ಮಾಡಿದರು. ಬಳಿಕ ಅಭಿಮಾನಿಗಳು ನಿಂಬೆ ಹಣ್ಣು ನೀಡುವಂತೆ ರೇವಣ್ಣ ಅವರಲ್ಲಿ ಮನವಿ ಮಾಡಿದ್ದಾರೆ. ರೇವಣ್ಣ ವೇದಿಕೆ ಮೇಲಿಂದ ಬೇಸಿನ್‍ನಲ್ಲಿದ್ದ ಎಲ್ಲಾ ನಿಂಬೆ ಹಣ್ಣುಗಳನ್ನು ಒಂದೊಂದಾಗಿ ಅಭಿಮಾನಿಗಳತ್ತ ಉರುಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮರ ಆಜಾನ್ ರೀತಿಯಲ್ಲೇ ರಾಮಜಪ ಮಾಡಿದ ಕಾಳಿಶ್ರೀ
ರೇವಣ್ಣ ಉರುಳಿಸಿದ ನಿಂಬೆ ಹಣ್ಣುಗಳನ್ನು ಅಭಿಮಾನಿಗಳು ಒಂದೊಂದಾಗಿಯೇ ಆಯ್ದುಕೊಂಡಿದ್ದಾರೆ. ಈ ತಮಾಷೆಯ ಗಳಿಗೆಯಲ್ಲಿ ವೇದಿಕೆ ಮೇಲೆ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿಯೂ ಭಾಗಿಯಾಗಿದ್ದರು. ಇದನ್ನೂ ಓದಿ: ದೇಶದಲ್ಲಿ ಹುಲಿಗಳ ಸಾವಿನ ಸಂಖ್ಯೆ ಗಣನೀಯ ಏರಿಕೆ!