ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಇಂದು ಪ್ರವಾಹ ಪೀಡಿತ ಕರಾವಳಿ ಭಾಗಕ್ಕೆ ಭೇಟಿ ನೀಡಲಿರುವ ಬಿಎಸ್‍ವೈ ನಗರದಲ್ಲಿ ಮಾತನಾಡಿ, ಇಂದು ಮಂಗಳೂರು ಭಾಗದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡುತ್ತೇನೆ. ನಾಳೆ ಶಿವಮೊಗ್ಗ ಮತ್ತು ಸಾಗರಕ್ಕೆ ಹೋಗುತ್ತೇನೆ ಎಂದು ತಿಳಿಸಿದರು.
ಭಾನುವಾರ ಸ್ವತಃ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಪ್ರವಾಹವನ್ನು ವೀಕ್ಷಣೆ ಮಾಡಿದ್ದಾರೆ. ತಕ್ಷಣ 3 ಸಾವಿರ ಕೋಟಿ ರೂ. ಬಿಡುಗಡೆ ಮಾಡಲು ನಾನು ಬೇಡಿಕೆ ಇಟ್ಟಿದ್ದೇನೆ. ಎಲ್ಲಾ ಸೇರಿದರೆ ಸರಿ ಸುಮಾರು 50 ಸಾವಿರ ಕೋಟಿ ನಷ್ಟ ಅಗಿದೆ. ನಾನು ಕೇಂದ್ರದಿಂದ 3 ಸಾವಿರ ಕೋಟಿ ರೂ. ಕೇಳಿದ್ದೇನೆ ಎಂದು ಹೇಳಿದ್ದಾರೆ.