ರಾಮನಗರ: ಕುಮಾರಣ್ಣ ಬಂದಾಗಲೇ ಎಲ್ಲರಿಗೂ ಹೊಟ್ಟೆ ನೋವು ಪ್ರಾರಂಭವಾಗುತ್ತೆ ಎಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ಸಿಎಂ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ರಾಮನಗರ ಜಿಲ್ಲೆಗೆ ಪ್ರಪ್ರಥಮವಾಗಿ ಭೇಟಿ ನೀಡಿದ್ದಾರೆ. ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಸಾರ್ವಜನಿಕರ ಕುಂದು-ಕೊರತೆಯ ಸಭೆಯಲ್ಲಿ ಪಾಲ್ಗೊಂಡಿದ್ದರು.
Advertisement
ಜಿಲ್ಲಾಡಳಿತ ಭವನದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ಕುಮಾರಣ್ಣ ಬಂದ ಮೇಲೆ ಹೊಟ್ಟೆ ನೋವು ಪ್ರಾರಂಭವಾಗುತ್ತದೆ ಎಂದು ಹೇಳಿಕೆ ನೀಡಿದರು. ಅಲ್ಲದೇ ನಾನೂ ಈಗ ತಾನೇ ಸಾಲಮನ್ನಾ ಮಾಡಿದ್ದೇನೆ. ಇದಾದ ನಂತರ ಒಂದರ ಮೇಲೆ ಒಂದೊಂದು ಸಮಸ್ಯೆ ಬರುತ್ತಿದೆ. ಇಷ್ಟು ದಿನ ಸಮಸ್ಯೆಗಳನ್ನು ಹೇಳಿಕೊಳ್ಳಲು ಯಾರು ಇಲ್ಲವೇ ಎಂದು ಪ್ರಶ್ನಿಸಿದರು.
Advertisement
Advertisement
ಮುಂದಿನ ದಿನಗಳಲ್ಲಿ ಮಾವು ಬೆಳಗಾರರಿಗೂ ಹಾಗೂ ರೇಷ್ಮೆ ಬೆಳೆಗಾರರಿಗೂ ಬೆಂಬಲ ಬೆಲೆ ನೀಡಬೇಕು ಎಂದು ಕೇಳಿ ಬರುತ್ತಿದೆ. ಯಾವುದೇ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ತೆಗೆದುಕೊಳ್ಳುಲು ಸಾಧ್ಯವಾಗುವುದಿಲ್ಲ. ಸಮಸ್ಯೆ ಕುರಿತು ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ರಾಜ್ಯದಲ್ಲಿ ಹಾಲು ಉತ್ಪಾದನೆಯೂ ಹೆಚ್ಚಾಗಿರುವುದರಿಂದ ಮಾರಾಟ ಮಾಡಲು ಕಷ್ಟವಾಗಿದೆ ಎಂದು ತಿಳಿಸಿದರು.
Advertisement
ರೇಷ್ಮೆಗೆ ಬೆಂಬಲ ಬೆಲೆ ನೀಡುವ ಕುರಿತು ತಿರ್ಮಾನ ಕೈಗೊಳ್ಳಲಾಗುವುದು. ರೇಷ್ಮೆಗೆ ಬೆಂಬಲ ಬೆಲೆ ನೀಡಲು ಕೇವಲ ರಾಮನಗರ ಜಿಲ್ಲೆ ಮಾತ್ರ ಸೀಮಿತವಿಲ್ಲ ರಾಜ್ಯಾದ್ಯಂತ ಇರುವ ರೇಷ್ಮೆ ಬೆಳಗಾರರ ಪರಿಸ್ಥಿತಿಯನ್ನು ಸಹ ನಾವು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಗೂ ಮೊದಲು ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಸಿಎಂ ಕುಮಾರಸ್ವಾಮಿಯವರು ಬಿಜಿಎಸ್ ಅಂಧರ ಶಾಲೆಯಲ್ಲಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಪಾಲ್ಗೊಂಡರು. ಭೋಜನ ಕೂಟದಲ್ಲಿ ಸಿಎಂ ಕುಮಾರಸ್ವಾಮಿಯರು ಆದಿ ಚುಂಚನಗಿರಿ ಕ್ಷೇತ್ರದ ಮಠಾಧೀಶ ಶ್ರೀ ನಿರ್ಮಲಾನಂದ ಸ್ವಾಮೀಜಿ ಹಾಗೂ ಸಚಿವರಾದ ಡಿ.ಕೆ ಶಿವಕುಮಾರ್, ಎಚ್ ಎಂ ರೇವಣ್ಣಜೊತೆಗೆ ಭೋಜನ ಮಾಡಿದ್ದಾರೆ.