ಇಂದು ನಾಗಮಂಗಲಕ್ಕೆ ಹೆಚ್‌ಡಿಕೆ ಭೇಟಿ – ನೊಂದವರಿಗೆ ಧನ ಸಹಾಯ

Public TV
2 Min Read
HD KUMARSWAMY

ಮಂಡ್ಯ: ನಾಗಮಂಗಲ ಗಲಭೆ ಪ್ರಕರಣ (Nagamangala Violence) ಹಿನ್ನೆಲೆ ಇಂದು (ಸೆ.19) ಜಿಲ್ಲೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumarswamy) ಭೇಟಿ ನೀಡಲಿದ್ದು, ನೊಂದ ಕುಟುಂಬಗಳಿಗೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ.

ನಾಗಮಂಗಲದಲ್ಲಿ (Nagamangala) ನಡೆದ ಗಲಭೆಯಿಂದಾಗಿ ಹಲವು ಬದುಕು ಬೀದಿಗೆ ಬಂದಿದೆ. ಈ ಸಂಬಂಧ ಸಚಿವ ಚೆಲುವರಾಯಸ್ವಾಮಿ (Cheluvarayaswamy) ಹಾನಿಗೊಳಗಾದವರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವುದರ ಜೊತೆಗೆ ವೈಯಕ್ತಿಕವಾಗಿಯೂ ಪರಿಹಾರ ಕೊಡುವುದಾಗಿಯೂ ತಿಳಿಸಿದ್ದಾರೆ. ಇತ್ತ ಕಡೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತಲ್ಲಿ ಹೇಳುವುದು ಬೇಡ ಮಾಡಿತೋರಿಸಬೇಕೆಂದು, ತಮ್ಮ ಸ್ವಂತ ಹಣದಲ್ಲಿ ನೊಂದ ಕುಟುಂಬಗಳಿಗೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ. ಈ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಇದನ್ನೂ ಓದಿ: ಬಿಗ್ ಬಾಸ್‌ಗೆ ಹೋಗ್ತಾರಾ ಅವಳಿ ಸಹೋದರಿಯರು?- ಸ್ಪಷ್ಟನೆ ನೀಡಿದ ಅದ್ವಿತಿ ಶೆಟ್ಟಿ

ಗಲಭೆಯಿಂದಾಗಿ ಹಲವು ಅಂಗಡಿಗಳು ಸುಟ್ಟು ಕರಕಲಾಗಿದ್ದು, ಇದರಿಂದ ಮಾಲೀಕರ ಬದುಕು ಬೀದಿಗೆ ಬಂದಂತಾಗಿದೆ. ಹೀಗಾಗಿ ಸಚಿವ ಚಲುವರಾಯಸ್ವಾಮಿ ಗಲಭೆಯಾದ ಮಾರನೇ ದಿನವೇ ಹಾನಿಗೆ ಒಳಗಾದವರಿಗೆ ಸರ್ಕಾರದಿಂದ ಪರಿಹಾರ ನೀಡುವುದರ ಜೊತೆ ವೈಯಕ್ತಿಕವಾಗಿಯೂ ಪರಿಹಾರ ನೀಡುವ ಭರವಸೆ ನೀಡಿದ್ದರು. ಇತ್ತ ಘಟನೆಯಾದ ಒಂದು ದಿನದ ಬಳಿಕ ನಾಗಮಂಗಲಕ್ಕೆ ಭೇಟಿ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾನಿಗೊಳಗಾದ ಸ್ಥಳಗಳಿಗೆ ತೆರಳಿ ಬಳಿಕ ಸಂಬಂಧಪಟ್ಟವರಿಗೆ ತಮ್ಮ ಕೈಲಾದಷ್ಟು ಆರ್ಥಿಕ ಸಹಾಯ ಮಾಡಿದ್ದಾರೆ.

ಇದೀಗ ಮತ್ತೆ ಹೆಚ್.ಡಿ ಕುಮಾರಸ್ವಾಮಿ ಎರಡನೇ ಬಾರಿಗೆ ಆರ್ಥಿಕ ಸಹಾಯ ಮಾಡಲು ಮುಂದಾಗಿದ್ದಾರೆ. ಇಂದು (ಸೆ.19) ಸಂಜೆ 5:30ಕ್ಕೆ ನಾಗಮಂಗಲದ ಬದ್ರಿಕೊಪ್ಪಲು ಗ್ರಾಮಕ್ಕೆ ಭೇಟಿ ನೀಡಲಿರುವ ಕುಮಾರಸ್ವಾಮಿ, ಆ ಗ್ರಾಮದಲ್ಲಿ ಗಲಭೆ ಸಂಬಂಧ ಜೈಲು ಸೇರಿರುವವರ ಹಾಗೂ ಪೊಲೀಸರಿಗೆ ಹೆದರಿ ಊರು ಬಿಟ್ಟಿರುವವರ ಕುಟುಂಬಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಆ ಕುಟುಂಬಸ್ಥರಿಗೆ ಆರ್ಥಿಕ ಸಹಾಯ ಮಾಡಿ ಧೈರ್ಯ ತುಂಬಲಿದ್ದಾರೆ. ಈ ಮೂಲಕ ನೊಂದ ಜನರ ಕಣ್ಣೀರು ಒರೆಸಲು ಹೆಚ್‌ಡಿಕೆ ಮುಂದಾಗಿದ್ದಾರೆ.ಇದನ್ನೂ ಓದಿ: 2040ಕ್ಕೆ ಮಾನವ ಸಹಿತ ಚಂದ್ರಯಾನ – 2,104 ಕೋಟಿ ಅನುದಾನಕ್ಕೆ ಕೇಂದ್ರ ಅಸ್ತು

ಜಿಲ್ಲಾಡಳಿತ ಈಗಷ್ಟೇ ಹಾನಿಯಾಗಿರುವ ಪ್ರಮಾಣವನ್ನು ಅಂದಾಜಿಸಲಾಗಿದೆ. ಇನ್ನೂ ಸಚಿವ ಚೆಲುವರಾಯಸ್ವಾಮಿ ವೈಯಕ್ತಿಕ ಪರಿಹಾರವನ್ನು ನೀಡಿಲ್ಲ. ಈ ಮಧ್ಯೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪರಿಹಾರವನ್ನು ನೀಡುವ ಮೂಲಕ ರಾಜ್ಯ ಸರ್ಕಾರ ಹಾಗೂ ಸಚಿವ ಚಲುವರಾಯಸ್ವಾಮಿಯನ್ನು ಓವರ್ ಟೇಕ್ ಮಾಡುವ ಮೂಲಕ ಜನರ ಕಣ್ಣೀರು ಒರೆಸಲು ಮುಂದಾಗಿದ್ದಾರೆ.

Share This Article