ಮೀಟೂ ಪ್ರಕರಣಗಳು ಒಂದೊಂದೆ ಬೆಳಕಿಗೆ ಬರುತ್ತಿವೆ. ಸಿನಿಮಾ ರಂಗದ ಕರಾಳಮುಖವನ್ನು ಬಿಚ್ಚಿಡುತ್ತಾ, ಒಬ್ಬೊಬ್ಬರೇ ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಹೇಳುತ್ತಿದ್ದಾರೆ. ತಮಗೆ ತೊಂದರೆ ಕೊಟ್ಟವರ ಹೆಸರನ್ನು ನೇರವಾಗಿ ಹೇಳದೇ ತಮ್ಮ ಬದುಕಿನಲ್ಲಿ ನಡೆದ ಆ ಕರಾಳ ಸತ್ಯವನ್ನು ಬಯಲು ಮಾಡುವ ಮೂಲಕ ಚಿತ್ರರಂಗದ ಮತ್ತೊಂದು ಮುಖವನ್ನು ಅನಾರವಣಗೊಳಿಸುತ್ತಿದ್ದಾರೆ. ಇವರ ಸಾಲಿಗೆ ಇದೀಗ ಮರಾಠಿ ಸಿನಿಮಾ ರಂಗದ ನಟಿಯು ಕೂಡ ಸೇರಿಕೊಂಡಿದ್ದಾರೆ.
ಇದು ಚಿತ್ರರಂಗದಲ್ಲಿ ನಡೆದಿರುವ ಘಟನೆ ಅಲ್ಲದೇ ಇದ್ದರೂ, ಸಿನಿಮಾ ರಂಗದಲ್ಲಿ ಇರುವವರಿಗೆ ಆದ ಕಹಿ ಘಟನೆ ಆಗಿದ್ದರಿಂದ ಸಿನಿಮಾ ರಂಗ ಇದನ್ನು ಗಂಭೀರವಾಗಿಯೇ ತಗೆದುಕೊಂಡಿದೆ. ಈ ಘಟನೆ ನಡೆದದ್ದು ಮರಾಠಿ ಸಿನಿಮಾ ರಂಗದಲ್ಲಾಗಿದ್ದು, ತಮ್ಮ ಜೀವನದಲ್ಲಿ ನಡೆದ ಘಟನೆಯನ್ನು ನಟಿ ತೇಜಸ್ವಿನಿ ಪಂಡಿತ್ ಹತ್ತು ವರ್ಷಗಳ ನಂತರ ಬಿಚ್ಚಿಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಅವರು ಮನಬಿಚ್ಚಿ ಮಾತನಾಡಿದ್ದಾರೆ.
ಆಗ ತಾನೆ ಸಿನಿಮಾ ರಂಗಕ್ಕೆ ಬಂದ ದಿನಗಳವು. ಹಾಗಾಗಿ ನನ್ನ ಬಳಿ ತುಂಬಾ ಹಣ ಇರಲಿಲ್ಲ. ಒಂದು ರೀತಿಯಲ್ಲಿ ಕಡಿಮೆ ಹಣದಲ್ಲೇ ನಾನು ಬದುಕು ನಡೆಸುತ್ತಿದ್ದೆ. ಹಾಗಾಗಿ ನನ್ನ ಬಳಿ ಹಣ ಇಲ್ಲ ಅನ್ನು ಕಾರಣಕ್ಕಾಗಿ ಅಂಥದ್ದೊಂದು ಘಟನೆಗೆ ಸಾಕ್ಷಿಯಾಗಬೇಕಾಯಿತು. ಪುಣೆಯ ಅಪಾರ್ಟ್ಮೆಂಟ್ ನಲ್ಲಿ ನಾನು ವಾಸವಿದ್ದೆ. ಆ ಅಪಾರ್ಟ್ಮೆಂಟ್ ಕಾರ್ಪೋರೇಟ್ ಒಬ್ಬರಿಗೆ ಸೇರಿದ್ದಾಗಿತ್ತು. ಬಾಡಿಗೆ ಪಾವತಿಸಲು ಅವರ ಬಳಿ ಹೋದಾಗ, ನೇರವಾಗಿಯೇ ಅವನು ಮಂಚಕ್ಕೆ ಕರೆದ’ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ
ತೇಜಸ್ವೀನಿಯನ್ನು ಅವನು ನೇರವಾಗಿ ಮಂಚಕ್ಕೆ ಬರುತ್ತೀಯಾ ಎಂದು ಕೇಳಿದಾಗ ಶಾಕ್ ಆಗಿದ್ದರಂತೆ. ಕೋಪದಿಂದಲೇ ಅವನಿಗೆ ನೀರಿನ ಲೋಟವನ್ನು ಮುಖಕ್ಕೆ ಎಸೆದು ಬಂದಿದೆ ಎಂದು ಹೇಳಿಕೊಂಡಿದ್ದಾರೆ. ‘ಆಗ ಬೈ ಅರಾಚೆ’ ಸಿನಿಮಾದ ಮೂಲಕ ಮರಾಠಿ ಚಿತ್ರರಂಗಕ್ಕೆ ಕಾಲಿಟ್ಟ ತೇಜಸ್ವೀನಿ ಆನಂತರ ಹಲವು ಚಿತ್ರಗಳನ್ನು ಮಾಡಿದ್ದಾರೆ. ಈ ಘಟನೆಯಿಂದಾಗಿ ಅವರು ಎಚ್ಚರಿಕೆಯಿಂದ ಬದುಕಬೇಕಾಯಿತು ಎಂದು ಹೇಳಿಕೊಂಡಿದ್ದಾರೆ.