ವಿಶಾಖಪಟ್ಟಣಂ: ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲೇ ದ್ವಿಶತಕ ಸಿಡಿಸಿದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ (England) ತಂಡಕ್ಕೆ ಮುಳುವಾಗಿದ್ದಾರೆ. ಈ ಬಗ್ಗೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾನ್ (Michael Vaughan) ಅವರೇ ಖುದ್ದಾಗಿ ಹೇಳಿಕೊಂಡಿದ್ದಾರೆ.
ಪಾಡ್‌ಕಾಸ್ಟ್ ಸಂದರ್ಶನವೊಂದರಲ್ಲಿ ಮಾತನಾಡಿರುವ ಮೈಕೆಲ್ ವಾನ್, ಶುಭಮನ್ ಗಿಲ್, ರೋಹಿತ್ ಶರ್ಮಾ ಅಲ್ಲ, ಯಶಸ್ವಿ ಜೈಸ್ವಾಲ್ (Yashasvi Jaiswal) ಇಂಗ್ಲೆಂಡ್ ತಂಡಕ್ಕೆ ದೊಡ್ಡ ಸಮಸ್ಯೆಯಾಗಿದ್ದಾರೆ. ನಂಬಲಸಾಧ್ಯವಾದ ಆಟಗಾರ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ 106 ರನ್‌ಗಳ ಭರ್ಜರಿ ಜಯ – WTC ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿತ
Advertisement
Advertisement
2023ರ ಐಪಿಎಲ್ (IPL) ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ನಾನು ಭೇಟಿಯಾಗಿದ್ದೆ. ಮರುದಿನವೇ ಅವರು ಮುಂಬೈ ಇಂಡಿಯನ್ಸ್ ವಿರುದ್ಧ ಚೊಚ್ಚಲ ಐಪಿಎಲ್ ಶತಕ (62 ಎಸೆತಗಳಲ್ಲಿ 124 ರನ್) ಸಿಡಿಸಿದ್ದರು. ಇದೀಗ ವಿಶ್ವದ ಅತ್ಯುತ್ತಮ ತಂಡದ ವಿರುದ್ಧ ದ್ವಿಶತಕ ಸಿಡಿಸಿದ್ದಾರೆ. ಈತ ಇಂಗ್ಲೆಂಡ್ ತಂಡಕ್ಕೆ ಸಮಸ್ಯೆ ಎಂದು ನಾನು ಖುದ್ದಾಗಿ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
Advertisement
ದ್ವಿಶತಕ ಸಿಡಿಸಿದ್ದ 3ನೇ ಕಿರಿಯ ಆಟಗಾರ:
ಈವರೆಗೆ ರಣಜಿ ಟ್ರೋಫಿ, ದುಲೀಪ್ ಟ್ರೋಫಿ, ಇರಾನಿ ಕಪ್ ಟೂರ್ನಿಗಳಲ್ಲಿ ದ್ವಿಶತಕ ಸಿಡಿಸಿದ್ದ 22 ವರ್ಷ ವಯಸ್ಸಿನ ಯಶಸ್ವಿ ಜೈಸ್ವಾಲ್ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಚೊಚ್ಚಲ ದ್ವಿಶತಕದ ಖಾತೆ ತೆರೆದರು. 277 ಎಸೆತಗಳಲ್ಲಿ 200 ರನ್ (18 ಬೌಂಡರಿ, 7 ಸಿಕ್ಸರ್) ಬಾರಿಸುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ಕಿರಿಯ ವಯಸ್ಸಿಗೆ ಈ ಸಾಧನೆ ಮಾಡಿದ ಭಾರತದ 3ನೇ ಕ್ರಿಕೆಟಿಗ ಎನಿಸಿಕೊಂಡರು.
Advertisement
ವಿಶೇಷ ಸಾಧನೆ ಮಾಡಿದ ಕಿರಿಯ ಆಟಗಾರ:
2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಂಗ್ಲರ ವಿರುದ್ಧ ಬ್ಯಾಟಿಂಗ್ ಪ್ರಾಬಲ್ಯ ಮೆರೆದ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ (Test Cricket) ದ್ವಿಶತಕ ಸಿಡಿಸಿದ 3ನೇ ಕಿರಿಯ ಭಾರತೀಯ ಕ್ರಿಕೆಟಿಗ ಎಂಬ ವಿಶೇಷ ಸಾಧನೆಗೆ ಪಾತ್ರರಾದರು. 1993ರಲ್ಲಿ ವಾಂಖೆಡೆ ಮೈದಾನದಲ್ಲಿ ವಿನೋಂದ್ ಕಾಂಬ್ಳಿ (21 ವರ್ಷ, 32 ದಿನಗಳು), ನಂತರ ಸುನೀಲ್ ಗವಾಸ್ಕರ್ 21 ವರ್ಷ 277 ದಿನಗಳಿದ್ದಾಗ ಈ ಸಾಧನೆ ಮಾಡಿದ್ದರು. ಆದ್ರೆ ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ಅತ್ಯಂತ ಕಿರಿಯ ವಯಸ್ಸಿನಲ್ಲೇ ದ್ವಿಶತಕ ಬಾರಿಸಿದ ಸಾಧನೆ ಜಾವೇದ್ ಮಿಯಾಂದಾದ್ ಹೆಸರಿನಲ್ಲಿದೆ. ಜಾವೇದ್ 19 ವರ್ಷ, 140 ದಿನಗಳ ವಯಸ್ಸಿನಲ್ಲಿ ತಮ್ಮ ಸಾಧನೆ ಮಾಡಿದ್ದರು. ಇದನ್ನೂ ಓದಿ: ಆಂಗ್ಲರ ವಿರುದ್ಧ ಯಶಸ್ವಿ ಜೈಸ್ವಾಲ್ ಬೊಂಬಾಟ್ ಶತಕ – ಬೃಹತ್ ಮೊತ್ತದತ್ತ ಭಾರತ
ಅಲ್ಲದೇ ಜೈಸ್ವಾಲ್ ಅವರು ಸೌರವ್ ಗಂಗೂಲಿ, ಗೌತಮ್ ಗಂಭೀರ್ ಮತ್ತು ವಿನೋದ್ ಕಾಂಬ್ಳಿ ಅವರನ್ನು ಹೊರತುಪಡಿಸಿ ಟೆಸ್ಟ್ ದ್ವಿಶತಕ ಸಿಡಿಸಿದ ಭಾರತದ 4ನೇ ಎಡಗೈ ಆಟಗಾರನಾಗಿದ್ದಾರೆ.
ಫೆ.15ರಂದು 3ನೇ ಟಸ್ಟ್:
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಈಗಾಗಲೇ 2 ಪಂದ್ಯಗಳು ಮುಕ್ತಾಯಗೊಂಡಿದ್ದು 1-1 ರಲ್ಲಿ ಸಮಬಲಗೊಂಡಿದೆ. ಫೆ.15ರಂದು ರಾಜ್‌ಕೋಟ್ ಮೈದಾನದಲ್ಲಿ 3ನೇ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಮೊದಲ ದಿನವೇ ʻಯಶಸ್ವಿʼ ಶತಕದ ಹೋರಾಟ – ಭರ್ಜರಿ ಮೊತ್ತದತ್ತ ಭಾರತ