Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್ ಸಿನಿಮಾ ಹೆಸರಿನಲ್ಲಿ ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಿರ್ಮಾಪಕನ ಪುತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದರ್ಶನ್ ಸಿನಿಮಾ ಹೆಸರಿನಲ್ಲಿ ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಿರ್ಮಾಪಕನ ಪುತ್ರ

Cinema

ದರ್ಶನ್ ಸಿನಿಮಾ ಹೆಸರಿನಲ್ಲಿ ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟ ಖ್ಯಾತ ನಿರ್ಮಾಪಕನ ಪುತ್ರ

Public TV
Last updated: February 21, 2024 8:11 am
Public TV
Share
2 Min Read
Majestic 2 3
SHARE

ನಟ ದರ್ಶನ್ ಗೆ ದಾಸ ಎಂಬ  ಹೆಸರು ಬಂದಿದ್ದೇ ಮೆಜೆಸ್ಟಿಕ್ ಚಿತ್ರದಿಂದ. 22 ವರ್ಷಗಳ ಹಿಂದೆ ತೆರೆಕಂಡು ದೊಡ್ಡ ದಾಖಲೆ ಬರೆದಿದ್ದ ಮೆಜೆಸ್ಟಿಕ್ ಸಿನಿಮಾ ನಟ ದರ್ಶನ್ ಗೆ ಒಳ್ಳೇ ಹೆಸರನ್ನೂ ತಂದುಕೊಟ್ಟಿತ್ತು. ಆ ಚಿತ್ರಕ್ಕೆ ಆರಂಭದಲ್ಲಿ ಕಾನ್ಸೆಪ್ಟ್ ಹೆಣೆದಿದ್ದ ರಾಮು ಅವರೇ ಈಗ ಮೆಜೆಸ್ಟಿಕ್ 2 ಹೆಸರಲ್ಲಿ ಚಿತ್ರ ನಿರ್ದೇಶಿಸಲು ಮುಂದಾಗಿದ್ದಾರೆ. ಮಹಾಶಿವರಾತ್ರಿಯ ಶುಭ ದಿನದಂದು ಆ ಚಿತ್ರ ಸೆಟ್ಟೇರಲು ಸಿದ್ದವಾಗಿದೆ. ಈ ಚಿತ್ರದ ಮೂಲಕ ಹಿರಿಯ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್ (Shilpa Srinivas) ಅವರ  ಪುತ್ರ ಭರತ್  (Bharat)ನಾಯಕನಾಗಿ ಪರಿಚಯವಾಗುತ್ತಿದ್ದಾರೆ. ಅಮ್ಮಾ ಎಂಟರ್‌ ಪ್ರೈಸಸ್ ಮೂಲಕ  ಚಿತ್ರದುರ್ಗ ಮೂಲದ ಟಿ. ಆನಂದಪ್ಪ ಅವರು ಈ  ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.  ದಶಕಗಳಿಂದಲೂ ತಂತ್ರಜ್ಞನಾಗಿ ಕೆಲಸ ಮಾಡುತ್ತಿರುವ  ರಾಮು ಅವರು  ಈ  ಚಿತ್ರಕ್ಕೆ  ಕಥೆ ಚಿತ್ರಕಥೆ  ಬರೆದು ನಿರ್ದೇಶನ ಮಾಡುತ್ತಿದ್ದಾರೆ.  ಕಳೆದ ಸೋಮವಾರ ಮೆಜೆಸ್ಟಿಕ್ -2  (Majestic 2) ಚಿತ್ರದ ಟೈಟಲ್ ಅನಾವರಣ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ  ಚಿತ್ರರಂಗದ ಅನೇಕ ಸ್ನೇಹಿತರು ಹಾಜರಿದ್ದು ಶುಭ ಹಾರೈಸಿದರು. ಆರಂಭದಲ್ಲಿ   ಮಾತನಾಡಿದ ನಿರ್ಮಾಪಕ ಆನಂದಪ್ಪ ನಾನು ಈ ಹಿಂದೆ  ಪಿಂಕ್ ನೋಟ್ ಎಂಬ ಚಿತ್ರವನ್ನು ಆರಂಭಿಸಿದ್ದೆ, ಅದಾಗಲೇ ೯೦ರಷ್ಟು ಮುಗಿದಿದೆ. ಇದು ಎರಡನೇ ಚಿತ್ರ. ಸ್ನೇಹಿತ ರಾಮು ಬಹಳ ದಿನಗಳಿಂದ  ಈ ಕಥೆ ಚೆನ್ನಾಗಿದೆ ನೋಡಿ ಅಂತ ಹೇಳ್ತಾ ಇದ್ದರು, ಒಮ್ಮೆ ಕಥೆ ಕೇಳಿದೆ, ಇಷ್ಟವಾಯ್ತು, ಜನ ನಮ್ಮ ಸಿನಿಮಾ ನೋಡಿ ಅದರಲ್ಲಿ ಏನಾದರೂ ಆಯ್ಕೆ ಮಾಡಿಕೊಳ್ಳಬೇಕು, ಅಂಥ ಸಿನಿಮಾ ಮಾಡಿ ಎಂದೆ, ನಾವೆಲ್ಲ ಸೇರಿ ಒಳ್ಳೇ ಚಿತ್ರ ಮಾಡುತ್ತಿದ್ದೇವೆ, ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದರು.

Majestic 2 2

ನಂತರ ಮಾತನಾಡಿದ ಶಿಲ್ಪಾ ಶ್ರೀನಿವಾಸ್, ನಾನು 1976ರಿಂದ ಚಿತ್ರರಂಗದಲ್ಲಿದ್ದೇನೆ, ಬಹುತೇಕ ಸ್ಟಾರ್‌ಗಳ  ಜೊತೆ 25 ಸಿನಿಮಾಗಳನ್ನು  ನಿರ್ಮಿಸಿದ್ದು, 500ಕ್ಕೂ ಹೆಚ್ಚು ಚಿತ್ರಗಳನ್ನು ವಿತರಿಸಿದ್ದೇನೆ.  ನನ್ನ ಮಗ ಭರತ್ ಮೊದಲ ಬಾರಿಗೆ ಹೀರೋ ಆಗ್ತಿದಾನೆ. ದೇವರ ರೂಪದಲ್ಲಿ ಆನಂದಪ್ಪ ಅವರನ್ನು ಕಳಿಸಿದ್ದಾನೆ. ನಿರ್ದೇಶಕ ರಾಮು, ಸಂಗೀತ ನಿರ್ದೇಶಕ ವಿನು ಮನಸು, ಛಾಯಾಗ್ರಾಹಕ ವೀನಸ್ ಮೂರ್ತಿ ಇವರೆಲ್ಲರ ಕಲ್ಪನೆಯಲ್ಲಿ  ಮೆಜೆಸ್ಟಿಕ್ ಚಿತ್ರ ಮೂಡಿಬರುತ್ತಿದೆ.  ನಮ್ಮ ಉಸಿರಲ್ಲಿ ಉಸಿರಾಗಿ, ಜೀವದಲ್ಲಿ ಜೀವವಾಗಿ, ಬೆರೆತು ಹೋಗಿರೋ  ಮಾಧ್ಯಮಮಿತ್ರರು, ಇದು ನಿಮ್ಮ ಸಿನಿಮಾ ಅಂತ ಚಿತ್ರಕ್ಕೆ ಆಶೀರ್ವಾದ ಮಾಡಿ ಎಂದು  ವಿನಂತಿಸಿಕೊಳ್ಳುತ್ತೇನೆ. 25 ವರ್ಷದ ಹಿಂದೆ ದರ್ಶನ್‌ರನ್ನು ಹೇಗೆ ಮೇಲಕ್ಕೆತ್ತಿದಿರೋ ಹಾಗೆ  ನಮ್ಮ ಪುತ್ರನನ್ನು ಹರಸಿ ಬೆಳೆಸಿ ಎಂದು ಮನವಿ ಮಾಡಿದರು.

Majestic 2 1

ನಿರ್ದೇಶಕ ರಾಮು ಮಾತನಾಡಿ ಆರಂಭದಲ್ಲಿ ನಾನು ಪಿ.ಎನ್.ಸತ್ಯ ಪ್ರೇಂ ಜೊತೆ ಕೆಲಸ ಮಾಡಿದ್ದೆ, ಮೆಜೆಸ್ಟಿಕ್ ಸ್ಕ್ರಿಪ್ಟ್ ಬರೆದಿದ್ದು ನಾನೇ, ನಂತರ ಸತ್ಯ ಅವರಜೊತೆ ಮನಸ್ತಾಪವಾಗಿ ನನ್ನನ್ನು ಬಿಟ್ಟು ಚಿತ್ರ ಮಾಡಿದರು. ನಾನು ಬೆಂಗಳೂರಿಗೆ ಬಂದಾಗ ಮೆಜೆಸ್ಟಿಕ್‌ನಲ್ಲಿ ನಡೀತಿರುವ ಘಟನೆಗಳನ್ನು ನೋಡಿದಾಗಲೇ ಈ ಟೈಟಲ್ ಹೊಳೆದಿತ್ತು, ಮೆಜೆಸ್ಟಿಕ್ ಸಿನಿಮಾ ನನ್ನ ಕನಸು, ಅದೀಗ ನನಸಾಗುತ್ತಿದೆ ಎಂದರು.

 

ನಾಯಕ ಭರತ್ ಮಾತನಾಡಿ ನಿರ್ದೇಶಕರು  ಈ ಕಥೆ, ಟೈಟಲ್  ಹೇಳಿದಾಗ  ತುಂಬಾ ಖುಷಿಯಾಯ್ತು. ನಾನು ದರ್ಶನ್ ಅವರ ಅಭಿಮಾನಿ. ಅವರು  ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಸಂದರ್ಭದಲ್ಲಿ ನಮ್ಮ ಸಿನಿಮಾ ಲಾಂಚ್ ಆಗ್ತಿದೆ. ಮರಿದಾಸನ ಪಾತ್ರಕ್ಕೆ  ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ ಎಂದರು, ನಂತರ ನಾಯಕಿ ಸಂಹಿತಾ ವಿನ್ಯಾ, ಸಂಗೀತ ನಿರ್ದೇಶಕ ವಿನು ಮನಸು, ಛಾಯಾಗ್ರಾಹಕ ವೀನಸ್ ಮೂರ್ತಿ, ಸ್ಟಂಟ್ ಮಾಸ್ಟರ್ ಚಿನ್ನಯ್ಯ ಚಿತ್ರದ ಕುರಿತಂತೆ ಮಾತನಾಡಿದರು.

TAGGED:BharatMajestic 2Shilpa Srinivasಭರತ್ಮೆಜೆಸ್ಟಿಕ್ 2ಶಿಲ್ಪಾ ಶ್ರೀನಿವಾಸ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

uranium.jpg
Latest

ಇರಾನ್‌ನ ಯುರೇನಿಯಂ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? – 32 ವರ್ಷಗಳ ಹಿಂದಿನ ʻಸಫೈರ್ʼ ಸೀಕ್ರೆಟ್ ಆಪರೇಷನ್ ರಿಪೀಟ್ ಆಗುತ್ತಾ?

Public TV
By Public TV
14 minutes ago
Bidar Food Poison
Bidar

ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ

Public TV
By Public TV
17 minutes ago
Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
22 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
24 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
37 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?