ಲಕ್ನೋ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು (Rahul Gandhi) ಹತ್ರಾಸ್‍ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ (Hathras Stampede) ಮೃತಪಟ್ಟ ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಸಂತ್ರಸ್ತರ ಕುಟುಂಬಸ್ಥರು ರಾಹುಲ್ ಗಾಂಧಿಯವರ ಬಳಿ ಆಸ್ಪತ್ರೆ ಹಾಗೂ ವೈದ್ಯಕೀಯ ಸೌಲಭ್ಯಗಳ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಸರಿಯಾದ ವೈದ್ಯಕೀಯ ಸೌಲಭ್ಯವಿದ್ದರೆ ನಮ್ಮ ಕುಟುಂಬಸ್ಥರನ್ನು ಉಳಿಸಿಕೊಳ್ಳಬಹುದಿತ್ತು ಎಂದು ಕೆಲವರು ಹೇಳಿಕೊಂಡಿದ್ದಾರೆ. ಈ ವೇಳೆ ರಾಹುಲ್ ಗಾಂಧಿಯವರು ಪಕ್ಷದ ವತಿಯಿಂದ ಸಾಧ್ಯವಾದಷ್ಟು ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ. ಅಲ್ಲದೇ ಈ ರೀತಿಯ ಘಟನೆಗಳು ನಡೆಯದಂತೆ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಹೆಚ್‌ಡಿಕೆ
View this post on Instagram
ಜುಲೈ 2 ರಂದು ಸ್ವಯಂಘೋಷಿತ ದೇವಮಾನವ ಸೂರಜ್ ಪಾಲ್ ಅಲಿಯಾಸ್ ಭೋಲೆ ಬಾಬಾನ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಿತಿ ಮೀರಿದ ಜನ ಸೇರಿ ಕಾಲ್ತುಳಿತ ಸಂಭವಿಸಿತ್ತು. ಭೋಲೆ ಬಾಬಾ ಹೆಜ್ಜೆ ಇಟ್ಟ ಮಣ್ಣನ್ನು ಸಂಗ್ರಹಿಸಲು ಜನ ಧಾವಿಸಿದಾಗ ನೂಕುನುಗ್ಗಲು ಸಂಭವಿಸಿ ಈ ದುರಂತ ಸಂಭವಿಸಿತ್ತು. ಈ ಘಟನೆಯಿಂದ 123 ಜನ ಸಾವಿಗೀಡಾಗಿದ್ದರು. ಈ ಸಂಬಂಧ ಕಾರ್ಯಕ್ರಮ ಆಯೋಜಕರ ವಿರುದ್ಧ ದೂರು ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬುಧವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರಂತದ ಸ್ಥಳಕ್ಕೆ ಭೇಟಿ ನೀಡಿದ್ದರು. ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದರು.
ವಿಷಯದ ಸಮಗ್ರತೆ ಮತ್ತು ವಿಚಾರಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ನಿವೃತ್ತ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ನ್ಯಾಯಾಂಗ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ಆಯೋಗವು ಮುಂದಿನ ಎರಡು ತಿಂಗಳಲ್ಲಿ ಕಾಲ್ತುಳಿತ ಘಟನೆಯ ಬಗ್ಗೆ ತನಿಖೆ ನಡೆಸಿ ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ. ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಚಿತ್ರ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಪ್ರಭಾಸ್ ಫ್ಯಾನ್ಸ್