– ಮತ್ತೊಮ್ಮ ತಮ್ಮ ಆನಂದ್ ಅಸ್ವಸ್ಥ
ಮಂಡ್ಯ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಮಂಡ್ಯದ ಯೋಧ ಗುರು ಹುತಾತ್ಮರಾಗಿದ್ದು, ಇದೀಗ ಜಿಲ್ಲೆಯಲ್ಲಿ ನೀರವ ಮೌನ ಆವರಿಸಿದೆ. ಇತ್ತ ಯೋಧ ಗುರು ಅವರ ತಮ್ಮ ಆನಂದ್ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.
ಗುರು ಅವರ 2ನೇ ತಮ್ಮ ಮಧು ಅವರು ಅಣ್ಣನನ್ನು ನೆನಪಿಸಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ. ಅಣ್ಣ ನಮಗೆಲ್ಲ ಜೋಪಾನ, ಧೈರ್ಯವಾಗಿ ಇರಿ ಎನ್ನುತ್ತಿದ್ದನು. ಆದರೆ ಈಗ ಅಣ್ಣನೇ ಇಲ್ಲ. ಯಾರಿಗೆ ಏನೇ ಹೇಳಿದ್ರೂ ಮತ್ತೆ, ಮತ್ತೆ ಇಂತಹ ಪರಿಸ್ಥಿತಿ ಮರುಕಳಿಸುತ್ತೆ ಎಂದು ದಾಳಿ ಬಗ್ಗೆ ನೋವನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ: ನಂಗೆ ಅವರು ಬೇಕು ಅಮ್ಮಾ..- ಮುಗಿಲು ಮುಟ್ಟಿದೆ ಹುತಾತ್ಮ ಗುರು ಪತ್ನಿಯ ಆಕ್ರಂದನ
ಹುತಾತ್ಮ ಗುರು ಅವರ ಮನೆಯಲ್ಲಿ ಪೋಷಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ನಡುವೆ ಗುರು ಅವರ ಸಹೋದರ ಆನಂದ್ ಅವರು ಅಸ್ವಸ್ಥಗೊಂಡಿದ್ದಾರೆ. ಆನಂದ್ ಅವರನ್ನು ಸಂಬಂಧಿಗಳು ಬೈಕಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: 2 ನಿಮಿಷ ಬಿಟ್ಟು ಕರೆ ಮಾಡ್ತೀನಿ ಅಂದೋನು ಮಾಡ್ಲೇ ಇಲ್ಲ- ಗುರು ಗೆಳೆಯ ಯೋಧ ಕಣ್ಣೀರು
ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಅದಿಲ್ ದರ್ ಎಂಬ ಉಗ್ರ ಸ್ಕಾರ್ಪಿಯೋ ಕಾರಿನಲ್ಲಿ ಸ್ಫೋಟಕ ತುಂಬಿ ಆತ್ಮಾಹುತಿ ದಾಳಿ ಮಾಡಿದ್ದನು. ಈ ದಾಳಿಯಲ್ಲಿ ಇದೂವರೆಗೆ 44 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv