ಮನೆಯಲ್ಲಿ ಧ್ವಜಾರೋಹಣ ಮಾಡ್ತಾರೆ: ಮುಂದಿನ ವರ್ಷ ಕೆಂಪು ಕೋಟೆಯಲ್ಲಿ ಮತ್ತೆ ಸಿಗೋಣ ಎಂದಿದ್ದ ಮೋದಿಗೆ ಖರ್ಗೆ ಟಾಂಗ್‌

Public TV
1 Min Read
Mallikarjun Kharge 1 1

ನವದೆಹಲಿ: ಮುಂದಿನ ವರ್ಷ ಕೆಂಪು ಕೋಟೆಯಲ್ಲಿ (Red Fort) ಸಿಗೋಣ ಎನ್ನುವ ಮೂಲಕ ಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಗೆಲುವು ನಿಶ್ಚಿತ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತಿರುಗೇಟು ನೀಡಿದ್ದಾರೆ.

ಪ್ರಧಾನಿಯ ಈ ಹೇಳಿಕೆಗಳು ಅವರ ಅಹಂಕಾರವನ್ನು ತೋರಿಸುತ್ತವೆ. ಅವರು ಮುಂದಿನ ವರ್ಷ ತಮ್ಮ ಮನೆಯಲ್ಲಿ ಧ್ವಜಾರೋಹಣ ಮಾಡುತ್ತಾರೆ ಎಂದು ಖರ್ಗೆ ಕುಟುಕಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷ ಸಿಗೋಣ; ಸ್ವಾತಂತ್ರ‍್ಯ ದಿನದ ಭಾಷಣದಲ್ಲಿ ಲೋಕಸಭೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ

Narendra Modi 1

ನಿಮ್ಮನ್ನು ಗೆಲ್ಲಿಸುವುದು ಅಥವಾ ತಿರಸ್ಕರಿಸುವುದು ಮತದಾರರ ಕೈಯಲ್ಲಿದೆ. 2024ರಲ್ಲಿ ಮತ್ತೊಮ್ಮೆ ಧ್ವಜಾರೋಹಣ ಮಾಡುತ್ತೇನೆ ಅಂತ ಈಗಲೇ ಹೇಳುವುದು ದುರಹಂಕಾರ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಣ್ಣಿನ ಸಮಸ್ಯೆಯಿಂದಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಗೈರಾಗಿದ್ದರು. ಅವರಿಗಾಗಿ ಮೀಸಲಿರಿಸಿದ್ದ ಖುರ್ಚಿ ಖಾಲಿ ಇತ್ತು. ಇದನ್ನೂ ಓದಿ: ನಾವು ತೆಗೆದುಕೊಳ್ಳುವ ನಿರ್ಧಾರ ಮುಂದಿನ 1,000 ವರ್ಷ ಭಾರತಕ್ಕೆ ದಿಕ್ಕು ತೋರಲಿದೆ: ಮೋದಿ

ನನಗೆ ಕಣ್ಣಿನ ಸಮಸ್ಯೆಯಿದೆ. ಮುಖ್ಯವಾಗಿ ಶಿಷ್ಟಾಚಾರದ ಪ್ರಕಾರ ಬೆಳಿಗ್ಗೆ 9:20 ಕ್ಕೆ ನನ್ನ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಬೇಕಾಗಿತ್ತು. ನಂತರ ಕಾಂಗ್ರೆಸ್ ಕಚೇರಿಗೆ ಬಂದು ತ್ರಿವರ್ಣ ಧ್ವಜವನ್ನು ಹಾರಿಸಬೇಕಾಗಿತ್ತು. ಭದ್ರತೆ ತುಂಬಾ ಬಿಗಿಯಾಗಿದ್ದರಿಂದ ನಾನು ಪಕ್ಷದ ಕಚೇರಿಗೂ ಸಮಯಕ್ಕೆ ತಲುಪಲು ಸಾಧ್ಯವಾಗಲಿಲ್ಲ ಎಂದು ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕೊನೆಯ ಸ್ವಾತಂತ್ರ‍್ಯ ದಿನದ ಭಾಷಣದಲ್ಲಿ ಮುಂದಿನ ವರ್ಷ ಇದೇ ಸ್ಥಳದಿಂದ ಭರವಸೆಗಳ ಪ್ರಗತಿಯ ಬಗ್ಗೆ ಮಾತನಾಡುವುದಾಗಿ ಹೇಳಿದ್ದರು. ಆ ಮೂಲಕ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಆಯ್ಕೆಯಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article