ಸಿಡ್ನಿ: ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಒಂದು ವರ್ಷ ನಿಷೇಧಕ್ಕೆ ಒಳಗಾದ ಆಸೀಸ್ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಕ್ರಿಕೆಟ್ ಕಿಟ್ ಅನ್ನು ಅವರ ತಂದೆ ಕಸದ ತೊಟ್ಟಿಗೆ ಎಸೆದಿದ್ದಾರೆ.
ಸ್ಮಿತ್ ಅವರ ತಂದೆ ಪೀಟರ್ ಸ್ಮಿತ್ ಶನಿವಾರ ಕ್ರಿಕೆಟ್ ಕಿಟ್ ಅನ್ನು ಕಸದ ತೊಟ್ಟಿಗೆ ಎಸೆಯುತ್ತಿರುವ ವಿಡಿಯೋವನ್ನು ಆಸೀಸ್ ಮಾಧ್ಯಮವೊಂದು ವರದಿ ಮಾಡಿದೆ. ಈ ವೇಳೆ ಅವರು ತನ್ನ ಮಗ ಕೆಲ ಸಮಯದ ಬಳಿಕ ಸರಿ ಹೋಗುತ್ತಾನೆ ಎಂದು ಹೇಳಿದ್ದಾರೆ.
Advertisement
https://twitter.com/DesiStuffs/status/980098952870506496?
Advertisement
ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಟೀಕೆಗೆ ಗುರಿಯಾಗಿದ್ದ ಸ್ಮಿತ್ ದಕ್ಷಿಣ ಆಫ್ರಿಕಾದಿಂದ ಮರಳಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಅಭಿಮಾನಿಗಳ, ಪೋಷಕರ ಕ್ಷಮೆ ಕೇಳಿದ್ದರು. ಅಲ್ಲದೇ ತಮ್ಮ ನಾಯಕತ್ವದ ವಿಫಲತೆಯಿಂದ ಕೃತ್ಯ ನಡೆದಿದ್ದು, ನನ್ನಿಂದಾಗಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತು ನನ್ನ ಪೋಷಕರಿಗೆ ತುಂಬಾ ನೋವಾಗಿದೆ. ಇದಕ್ಕಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಕಣ್ಣೀರಿಟ್ಟಿದ್ದರು. ಮೂಲಗಳ ಪ್ರಕಾರ ಕೆಲ ದಿನಗಳಿಂದ ಪ್ರಕರಣದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ನೊಂದ ಸ್ಮಿತ್ ದುಬೈಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಆಸ್ಟ್ರೇಲಿಯಾ ಪರ ಮತ್ತೆ ಕ್ರಿಕೆಟ್ ಆಡಲ್ಲ: ಕ್ಷಮೆಯಾಚಿಸಿ ಕಣ್ಣೀರಿಟ್ಟ ವಾರ್ನರ್
Advertisement
Advertisement
ಆಸೀಸ್ ಆಟಗಾರರು ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಬಳಿಕ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಪ್ರಮುಖ ಸಂಸ್ಥೆಗಳ ಪ್ರಯೋಜಕತ್ವವನ್ನು ಕಳೆದುಕೊಂಡಿತ್ತು. ಇದರೊಂದಿಗೆ ಕಳ್ಳಾಟದಲ್ಲಿ ಭಾಗಿಯಾಗಿದ್ದ ವಾರ್ನರ್, ಸ್ಮಿತ್, ಬ್ಯಾನ್ ಕ್ರಾಫ್ಟ್ ರೊಂದಿಗೆ ಖಾಸಗಿ ಸಂಸ್ಥೆಗಳು ಮಾಡಿಕೊಂಡಿದ್ದ ವೈಯಕ್ತಿಕ ಒಪ್ಪಂದವನ್ನು ಮುರಿದುಕೊಂಡಿದ್ದವು. ಇದರಿಂದ ಆಸೀಸ್ ಮಂಡಳಿ ಹಾಗೂ ಆಟಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೇ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಇದನ್ನೂ ಓದಿ: ಚೆಂಡು ವಿರೂಪಗೊಳಿಸುತ್ತಿರೋ ಮತ್ತೊಬ್ಬ ಆಸೀಸ್ ಆಟಗಾರನ ವಿಡಿಯೋ ವೈರಲ್