ಪಾಟ್ನಾ: ಮೈತ್ರಿ ಕಡಿದುಕೊಂಡು ನೂತನ ಸರ್ಕಾರ ರಚನೆಯಾದ ದಿನದಿಂದಲೇ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿಗೆ ಬಿಹಾರದ ನೂತನ ಸಿಎಂ ನಿತೀಶ್ ಕುಮಾರ್ ಮುಂದಾಗಿದ್ದಾರೆ.
ಜನತಾ ದಳ (ಯುನೈಟೆಡ್) (ಜೆಡಿಯು) ಬಿಜೆಪಿಯೊಂದಿಗೆ ಮುರಿದು ಬಿಹಾರದಲ್ಲಿ ಸರ್ಕಾರ ರಚಿಸಲು ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಪ್ರಾದೇಶಿಕ ಪಕ್ಷಗಳೊಂದಿಗೆ ಕೈಜೋಡಿಸಿತು. ಇಂದು 8ನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಆರ್‌ಜೆಡಿಯ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಊಟ ಬೇಕಂದ್ರೆ ಕೇಳಿ ಹಾಕಿಸ್ಕೋತಿನಿ ಬಿಡು ಗುರು – ನಟ ಕೋಮಲ್ ಶೈಲಿ ಕಾಪಿ ಹೊಡೆದ್ರಾ ಶಿಖರ್ ಧವನ್?
ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಮಾತನಾಡಿದ ಅವರಿಂದು, ಪ್ರಧಾನಿ ನರೇಂದ್ರ ಮೋದಿ ಗೆದ್ದಿರೋದು 2014, 2018ರಲ್ಲಿ 2024ರಲ್ಲಿ ಅಲ್ಲ. ನಾವು 2024ರ ಚುನಾವಣೆಯ ಬಗ್ಗೆ ಚಿಂತಿಸಬೇಕು ಎಂದು ಪಕ್ಷದ ಎಲ್ಲ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ನಮ್ಮ ಪಕ್ಷವು ಬಿಜೆಪಿ ತೊರೆಯಲು ಒಟ್ಟಾಗಿ ನಿರ್ಧಾರ ಮಾಡಿತು. 2024ರ ಚುನಾವಣೆಗೆ ಏನು ಬೇಕಾದರೂ ಆಗಬಹುದು. 2014-2018ರಲ್ಲಿ ಅಧಿಕಾರಕ್ಕೆ ಬಂದವರು 2024 ರಲ್ಲಿ ಗೆಲ್ಲುತ್ತಾರೆಯೇ? 2024ಕ್ಕೆ ನಾವೆಲ್ಲರೂ ಒಂದಾಗಬೇಕೆಂದು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಂದು ಹುಡುಗಿ ನಿಮ್ಮೊಂದಿಗೆ ಸೆಕ್ಸ್ ಮಾಡಬೇಕು ಅಂದ್ರೆ..? – ಶಕ್ತಿಮಾನ್ ಖ್ಯಾತಿಯ ಮುಖೇಶ್ ವಿವಾದಾತ್ಮಕ ಹೇಳಿಕೆ
ಇದೇ ವೇಳೆ 2024ಕ್ಕೆ ಪ್ರಧಾನಿ ಅಭ್ಯರ್ಥಿ ಆಗಲಿದ್ದಾರೆ ಎನ್ನುವ ಹೇಳಿಕೆಯನ್ನು ತಳ್ಳಿಹಾಕಿದ್ದು, ನಾನು ಪ್ರಧಾನಿಗೆ ಹುದ್ದೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಿದ್ದಾರೆ.