ಶಾಲೆಗೆ ಕುಡಿದು ಬರುತ್ತಿದ್ದ ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಿದ ಗ್ರಾಮಸ್ಥರು

Public TV
1 Min Read
protest

ಹಾವೇರಿ: ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಗ್ರಾಮಸ್ಥರು ನಡೆಸಿದ ಪ್ರತಿಭಟನೆಗೆ ಮಣಿದು ಅವರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಿ ಎಂದು ಬಿಇಓ ಆದೇಶ ಹೊರಡಿಸಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ್ ವರ್ಗಾವಣೆಯಾದವರು. ಇವರು ಶಾಲೆಗೆ ಸರಿಯಾಗಿ ಬರುವುದಿಲ್ಲ, ಬಂದರೂ ಮದ್ಯಪಾನ ಮಾಡಿ ಬರುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಭವಿಷ್ಯಕ್ಕೆ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯೋಪಾಧ್ಯಾಯರ ಅಮಾನತು ಅಥವಾ ಬೇರೆ ಶಾಲೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಶಾಲಾ ಕೊಠಡಿಗೆ ಬೀಗ ಹಾಕಿ ಶುಕ್ರವಾರ ರಾತ್ರಿವರೆಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.

protest 2

ಗ್ರಾಮಸ್ಥರ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿಸಿಪಿಐ ಅವರ ಸೂಚನೆ ಮೇರೆಗೆ ಮುಖ್ಯೋಪಾಧ್ಯಾಯರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ಹಾನಗಲ್ ತಾಲೂಕಿನ ಹೋತನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜಿಸಿ ಬಿಇಓ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ- ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಯುವಕರು

Share This Article
Leave a Comment

Leave a Reply

Your email address will not be published. Required fields are marked *