ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ವೇಯ (Bengaluru -Mysuru Expressway) ಸರ್ವೀಸ್ ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಮನಗರ (Ramanagara) ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ ನಡೆದಿದೆ.
ರಾಮನಗರ ತಾಲೂಕಿನ ದಾರಾಪುರ ಗ್ರಾಮದ ನಿವಾಸಿ ನಿತಿನ್ (21) ಮೃತಪಟ್ಟ ಸವಾರ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಹಿಂಬದಿ ಸವಾರ ಸೇವಂತ್‌ನನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ಯುವಕರಿಬ್ಬರೂ ಸ್ಕೂಟಿಯಲ್ಲಿ ವಾಪಸ್ ಮನೆಗೆ ತೆರಳುತ್ತಿದ್ದರು. ಈ ವೇಳೆ ಕೆಂಪನಹಳ್ಳಿ ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಎದುರಿನಿಂದ ಬಂದ ಲಾರಿಯೊಂದು ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರು ಮೋದಿ ಸರ್ಕಾರದ ಕೈಗೊಂಬೆ: ಖರ್ಗೆ ವಾಗ್ದಾಳಿ
ಡಿಕ್ಕಿಯ ರಭಸಕ್ಕೆ ಸವಾರ ನಿತಿನ್ ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: SIRನಲ್ಲಿ ಗೋಲ್ಮಾಲ್ ಆರೋಪ; ದೇಶಾದ್ಯಂತ ಹೋರಾಟಕ್ಕೆ ‘ಕೈ’ ಸಜ್ಜು

