ಲಕ್ನೋ: ಅಯೋಧ್ಯೆಯ (Ayodhye) ರಾಮಮಂದಿರದ (Ram Mandir) ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ (Mahant Satyendra Das) ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಕಾಲೇಜು ಆಸ್ಪತ್ರೆಯಲ್ಲಿ (Sanjay Gandhi Post Graduate Institute of Medical Sciences) ಚಿಕಿತ್ಸೆ ಪಡೆಯುತ್ತಿದ್ದಾರೆ.
85 ವಯಸ್ಸಿನ ಸತ್ಯೇಂದ್ರ ದಾಸ್ ಅವರನ್ನು ಭಾನುವಾರ ಪ್ರಾಥಮಿಕ ಚಿಕಿತ್ಸೆಯ ನಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ʻಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಚೊಂಬು, ಚಿಪ್ಪು.. ಗೋವಿಂದ ಗೋವಿಂದ..ʼ – ಎಂ. ಲಕ್ಷ್ಮಣ್ ಲೇವಡಿ
Advertisement
Advertisement
ಸೋಮವಾರ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಜೊತೆಗೆ ಅವರಿಗೆ ಶುಗರ್ ಹಾಗೂ ಬಿಪಿ ಸಮಸ್ಯೆಯಿದೆ. ಸದ್ಯ ನ್ಯೂರಾಲಜಿ ವಾರ್ಡ್‌ನ ಹೈ ಡಿಪೆಂಡೆನ್ಸಿ ಯುನಿಟ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ.
Advertisement
ಸತ್ಯೇಂದ್ರ ದಾಸ್ ಅವರು 1992ರಲ್ಲಿ ಡಿ.6 ರಂದು ಬಾಬರಿ ಮಸೀದಿಯನ್ನು ಕೆಡವಿದಾಗ, ತಾತಾಲ್ಕಿಕ ರಾಮ್ ಮಂದಿರದ ಅರ್ಚಕರಾಗಿದ್ದರು.ಇದನ್ನೂ ಓದಿ: ವಿಜಯೇಂದ್ರನ ಕರ್ಮಕಾಂಡದ ಬಗ್ಗೆ ವಿವರಿಸಲು ದೆಹಲಿಗೆ ಹೊರಟಿದ್ದೇವೆ – ಯತ್ನಾಳ್ ಲೇವಡಿ