ಭೋಪಾಲ್: ಮಧ್ಯಪ್ರದೇಶದ ಪೋರ್ಸಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಬಳಿಕ ಕಾಂಡೋಮ್ ಪ್ಯಾಕೆಟ್ ಬಳಸಿ ಮಹಿಳೆಯ ತಲೆ ಗಾಯಕ್ಕೆ ಡ್ರೆಸ್ಸಿಂಗ್ ಮಾಡಲಾಗಿದೆ. ಗಾಯದ ತೀವ್ರತೆಯಿಂದ ಆಕೆಯನ್ನು ಮೊರೆನಾದ ಜಿಲ್ಲಾಸ್ಪತ್ರೆಗೆ ದಾಖಲಿಸಿದಾಗ ಈ ಅಚ್ಚರಿ ಘಟನೆ ಬೆಳಕಿಗೆ ಬಂದಿದೆ.
ಮೊರೆನಾ ಜಿಲ್ಲಾಸ್ಪತ್ರೆ ವೈದ್ಯರು ಮಹಿಳೆಯ ತಲೆಯ ಭಾಗದ ಗಾಯಕ್ಕೆ ಡ್ರೆಸ್ಸಿಂಗ್ ಬದಲಾಯಿಸಲು ಮುಂದಾದಾಗ ಮಹಿಳೆಯ ತಲೆಯಲ್ಲಿ ಬ್ಯಾಂಡೇಜ್‌ಗೆ ಬದಲಾಗಿ ಕಾಂಡೋಮ್ ಪ್ಯಾಕೆಟ್ ಬಳಸಿರುವುದನ್ನು ಕಂಡು ಶಾಕ್ ಆಗಿದ್ದಾರೆ.
Advertisement
Advertisement
ಚಿಕಿತ್ಸೆ ಪಡೆದ ಮಹಿಳೆಯನ್ನು ಧರ್ಮಗಢ ಮೂಲದ ರೇಷ್ಮಾ ಬಾಯಿ ಎಂದು ಗುರುತಿಸಲಾಗಿದೆ. ಈಕೆ ಇತ್ತೀಚೆಗೆ ತಲೆಯ ಗಾಯದ ಚಿಕಿತ್ಸೆಗಾಗಿ ಪೋರ್ಸಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೋದಾಗ ರಕ್ತಸ್ರಾವ ನಿಲ್ಲಿಸಲು ಕಾಂಡೋಮ್ ಬಳಸಲಾಗಿದೆ. ಇದಾದ ಕೆಲ ದಿನಗಳಲ್ಲೇ ಮಹಿಳೆಗೆ ಗಾಯದ ತೀವ್ರತೆ ಹೆಚ್ಚಾಗಿದೆ. ಆಕೆಯನ್ನು ಮೊರೆನಾದಲ್ಲಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದಾಗ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
Advertisement
Advertisement
ಅಂದು ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಡಾ.ಧರ್ಮೇಂದ್ರ ರಜಪೂತ್ ತುರ್ತು ಕರ್ತವ್ಯದಲ್ಲಿದ್ದರು. ವಾರ್ಡ್ ಬಾಯ್ ಆಗಿ ಅನಂತರಾಮ್ ಇದ್ದರು. ಈ ವೇಳೆ ವೈದ್ಯರು ವಾರ್ಡ್ ಬಾಯ್‌ಗೆ ಹತ್ತಿ ಪ್ಯಾಡ್‌ನ ಮೇಲೆ ಕೆಲವು ಕಾರ್ಡ್ ಬೋರ್ಡ್‌ಗಳನ್ನು ಇರಿಸುವಂತೆ ಸೂಚಿಸಿದರು. ಆದರೆ ವಾರ್ಡ್ಬಾಯ್ ಕಾಂಡೋಮ್ ಪ್ಯಾಕೆಟ್ ಅನ್ನು ಬಳಸಿದ್ದಾನೆ ಎಂದು ವರದಿಯಾಗಿದೆ.
ಸದ್ಯ ಪೋರ್ಸಾ ಸಮುದಾಯ ಆರೋಗ್ಯ ಕೇಂದ್ರದ ಡ್ರೆಸ್ಸರ್‌ನನ್ನು ರಾಜ್ಯ ಆರೋಗ್ಯ ಇಲಾಖೆ ಅಮಾನತುಗೊಳಿಸಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.