ಸೌತ್ ನಟಿ ಪಾಯಲ್ (Payal) ಸದ್ಯ ‘ಮಂಗಳವಾರಂ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮೊದಲ ಪ್ರೀತಿಯ ಬಗ್ಗೆ ನಟಿ ಬಾಯ್ಬಿಟ್ಟಿದ್ದಾರೆ. ರಿಜೆಕ್ಷನ್ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ:ಪ್ರಭಾಸ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಹೈದರಾಬಾದ್ ಗೆ ವಾಪಸ್
ಪಾಯಲ್, ತಾವು ಹೈಸ್ಕೂಲಿನಲ್ಲಿ ಇದ್ದಾಗಲೇ ಒಬ್ಬ ಹುಡುಗನನ್ನು ನೋಡಿ ಇಷ್ಟಪಟ್ಟಿದ್ದೆ. ಆದರೆ ಆತ ನನ್ನನ್ನು ರಿಜೆಕ್ಟ್ ಮಾಡಿಬಿಟ್ಟ ಎಂದು ಮಾತನಾಡಿದ್ದಾರೆ. ಎಸ್‌ಎಸ್‌ಎಲ್‌ಸಿ ಕಡೆಯ ದಿನಗಳಲ್ಲಿ ನಾನು ನನ್ನ ಪ್ರೀತಿಯನ್ನು ಆತನ ಬಳಿ ವ್ಯಕ್ತಪಡಿಸಿದಾಗ ಅವನು ನನ್ನನ್ನು ತಿರಸ್ಕರಿಸಿದ. ನನಗೆ ಪ್ರೇಮ, ಪ್ರೀತಿಯಲ್ಲಿ ಆಸಕ್ತಿಯಿಲ್ಲ ಎಂದುಬಿಟ್ಟ.
ಆ ನೋವಿನಿಂದ ಅಂದು ನನಗೆ ಓದಿನತ್ತ ಗಮನ ಹರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಪರೀಕ್ಷೆಗಳಲ್ಲಿ ಫೇಲ್ ಆಗಿದ್ದೆ. ಈ ವಿಚಾರವನ್ನು ನನ್ನ ತಾಯಿಯ ಬಳಿ ಹೇಳಿಕೊಂಡು ಅತ್ತುಬಿಟ್ಟಿದ್ದೆ. ಅಂದು ತಾಯಿ ನನ್ನ ಬೆಂಬಲಕ್ಕೆ ನಿಂತರು ಎಂದು ಕನ್ನಡದ ‘ಹೆಡ್‌ಬುಷ್’ (Headbush) ನಟಿ ತಮ್ಮ ಹಳೆಯ ದಿನಗಳನ್ನ ಸ್ಮರಿಸಿದ್ದಾರೆ.
‘ಮಂಗಳವಾರಂ’ ಸಿನಿಮಾದಲ್ಲಿ ಪಾಯಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನವೆಂಬರ್ 17ರಂದು ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.