ಹೈದರಾಬಾದ್: ವಿದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಭಾರತದಲ್ಲೂ ಮೂರನೇ ಅಲೆಯ ಭೀತಿ ಹೆಚ್ಚುತ್ತಿದೆ. ಈ ಹಿನ್ನೆಲೆ ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಆರೋಗ್ಯ ಕಾರ್ಯಕರ್ತರು ಗೌಪ್ಯವಾಗಿ ಬೂಸ್ಟರ್ ಡೋಸ್ ಪಡೆಯಲು ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
Advertisement
ಮೂರನೇ ಡೋಸ್ ನೀಡುವ ಬಗ್ಗೆ ಐಸಿಎಂಆರ್ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಆದರೂ ಆರೋಗ್ಯ ಕಾರ್ಯಕರ್ತರು ಮೂರನೇ ಡೋಸ್ ಲಸಿಕೆಯನ್ನು ಪಡೆಯುತ್ತಿದ್ದಾರೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮನ್ನ ಎಂದೂ ಅವ್ರು ಕೆಲ್ಸದವರಂತೆ ನೋಡಿಲ್ಲ: ಕೇಶ ವಿನ್ಯಾಸಕಾರ ಕಾರ್ತಿಕ್ ಭಾವುಕ
Advertisement
ಭಾರತದಲ್ಲಿ ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ ಪಡೆದು ಈಗಾಗಲೇ ಎಂಟು ತಿಂಗಳು ಕಳೆಯುತ್ತಾ ಬಂದಿದೆ. ಹೀಗಾಗಿ ವ್ಯಾಕ್ಸಿನ್ ಪ್ರಭಾವ ಕುಸಿದಿರುವ ಅನುಮಾನ ಆರೋಗ್ಯ ಕಾರ್ಯಕರ್ತರಲ್ಲಿ ಮೂಡಿದ್ದು, ವಿದೇಶಗಳಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಮೂರನೇ ಡೋಸ್ ಪಡೆಯುತ್ತಿದ್ದಾರೆ. ಎರಡನೇ ಅಲೆಯಂತೆ ಮೂರನೇ ಅಲೆಯೂ ಪರಿಣಾಮಕಾರಿಯಾದರೆ ಮನೆಯಲ್ಲಿ ಮಕ್ಕಳು, ಪೋಷಕರು, ವೃದ್ಧರಿರುವ ಹಿನ್ನೆಲೆಯಲ್ಲಿ ಅವರಿಗೆ ತೊಂದರೆಯಾಗದಿರಲಿ ಎಂದು ಲಸಿಕೆ ಪಡೆಯುತ್ತಿದ್ದೇವೆ ಎಂದು ಕೆಲವು ಆರೋಗ್ಯ ಕಾರ್ಯಕರ್ತರು ಹೇಳಿಕೊಂಡಿದ್ದಾರೆ.
Advertisement
Advertisement
ಆರೋಗ್ಯ ಕಾರ್ಯಕರ್ತರು ಮೂರನೇ ಡೋಸ್ ಪಡೆಯುತ್ತಿರುವ ಬಗ್ಗೆ ಮಾಹಿತಿ ಉನ್ನತ ಅಧಿಕಾರಿಗಳ ಗಮನಕ್ಕೆ ಬಂದರೂ, ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಕುರಿತು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ಮಾತನಾಡಿದ್ದು, ಸಿಬ್ಬಂದಿ ತಮ್ಮ ವೈಯಕ್ತಿಕ ಜವಾಬ್ದಾರಿ ಮೇಲೆ ಮೂರನೇ ಡೋಸ್ ಪಡೆಯುತ್ತಿದ್ದಾರೆ. ಮೂರನೇ ಡೋಸ್ ಪಡೆದ ಬಗ್ಗೆ ಯಾವುದೇ ಪ್ರಮಾಣ ಪತ್ರ ನೀಡಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಯಿಗೆ ಕಿರುಕುಳ ನೀಡಿದ ವ್ಯಕ್ತಿಯ ಮೇಲೆ ಹಸು ದಾಳಿ