ಬೆಂಗಳೂರು: ನಾಯಿ ಹಾಗೂ ಪ್ರಾಣಿಗಳ ಕಡಿತಕ್ಕೆ ಒಳಗಾದವರಿಗೆ ಚಿಕಿತ್ಸೆ ನಿರಾಕರಣೆ ಮಾಡದಂತೆ ವೈದ್ಯರಿಗೆ ಆರೋಗ್ಯ ಇಲಾಖೆ (Health Department) ಸೂಚಿಸಿದೆ. ಅಲ್ಲದೇ ಪ್ರಾಣಿಗಳ ಕಡಿತಕ್ಕೆ ಬಳಕೆಯಾಗುವ ಅಗತ್ಯ ಔಷಧಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಲು ಆದೇಶದಲ್ಲಿ ತಿಳಿಸಿದೆ. ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಎಂದು ಪರಿಗಣಿಸದೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ರೇಬಿಸ್ (Rabies) ಒಂದು ಮಾರಣಾಂತಿಕ ಕಾಯಿಲೆಯಾಗಿದೆ. ಆದರೆ ಸೂಕ್ತ ಸಮಯದಲ್ಲಿ ಅಗತ್ಯ ಚಿಕಿತ್ಸೆ ನೀಡಿದರೆ ರೋಗಿಯ ಪ್ರಾಣವನ್ನು ಉಳಿಸಬಹುದು. 2030ರ ವೇಳೆಗೆ ನಾಯಿ ಕಡಿತದಿಂದ ಬರುವ ರೇಬೀಸ್‍ನ ನಿರ್ಮೂಲನೆ ಮಾಡುವುದು ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದ ಗುರಿಯಾಗಿದೆ. ಇದನ್ನೂ ಓದಿ: ಗರ್ಭಿಣಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಸಾಬೀತು – 11 ಲಕ್ಷ ದಂಡ
ಕರ್ನಾಟಕದಲ್ಲಿ (Karnataka) ರೇಬಿಸ್ ಕಾಯಿಲೆ ಮುಕ್ತ ಎಂದು ಈಗಾಗಲೇ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ರೇಬಿಸ್ ಕಾಯಿಲೆಯಿಂದ ಜೀವ ರಕ್ಷಿಸಬಲ್ಲ ಔಷಧಿಯಾದ ರೇಬಿಸ್ ನಿರೋಧಕ ಲಸಿಕೆ (ARV) ಮತ್ತು ರೇಬಿಸ್ ಇಮೂನೂಗ್ಲಾಬಿಲಿನ್‍ಗಳನ್ನು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕಷ್ಟು ದಾಸ್ತಾನು ಲಭ್ಯವಿರುವಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಪ್ರಾಣಿಗಳ ಕಡಿತದಿಂದ ತೊಂದರೆಗೊಳಗಾದವರಿಗೆ ಚಿಕಿತ್ಸೆಯನ್ನು ನಿರಾಕರಿಸದೇ ಎಲ್ಲರಿಗೂ ಉಚಿತ ಲಸಿಕೆ ಒದಗಿಸಲು ತಿಳಿಸಲಾಗಿದೆ. ಈ ಔಷಧಿಗಳನ್ನು ವಿವೇಚನೆಯಿಂದ ಬಳಸಲು ರೇಬೀಸ್ ರೋಗನಿರೋಧಕ ಮಾರ್ಗಸೂಚಿಗಳನ್ನು ಇಲಾಖೆ ಹೊರಡಿಸಿದೆ. ಇದನ್ನೂ ಓದಿ: ಸಿಕ್ಕಿಂ ಹಠಾತ್ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 53ಕ್ಕೆ ಏರಿಕೆ – 140 ಮಂದಿ ಕಣ್ಮರೆ
Web Stories