ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ (Dengue Cases) ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ (Health Department Guidelines) ಪ್ರಕಟಿಸಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ; ಜು.15 ಕ್ಕೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ತೀರ್ಮಾನ
ಕೋವಿಡ್ ಸಂದರ್ಭದಲ್ಲಿ ವಾರ್ ರೂಮ್ ತೆರೆದ ಮಾದರಿಯಲ್ಲೇ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಡೆಂಗ್ಯೂ ವಾರ್ ರೂಮ್ (Dengue War Room) ತೆರೆಯಲು ಸೂಚನೆ ನೀಡಿದೆ. ಇದರೊಂದಿಗೆ ಇನ್ನೂ ಅನೇಕ ಕ್ರಮಗಳನ್ನು ಕೈಗೊಂಡಿದೆ. ಇದನ್ನೂ ಓದಿ: ಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ
Advertisement
Advertisement
ಮಾರ್ಗಸೂಚಿ ಏನು?
1. ಒಂದೇ ಸ್ಥಳದಲ್ಲಿ ಎರಡು ಅಥವಾ ಮೂರು ಡೆಂಗ್ಯೂ ಕೇಸ್ ಕಂಡುಬಂದರೆ ಹಾಟ್ ಸ್ಪಾಟ್ ಅಂತ ಪರಿಗಣನೆ
2. ಹಾಟ್‌ಸ್ಪಾಟ್‌ಗಳಲ್ಲಿ ಲಾರ್ವಾ ನಾಶ ಚಟುವಟಿಕೆಯನ್ನು ತೀವ್ರಗೊಳಿಸುವುದು, ಒಳಾಂಗಣ/ಹೊರಾಂಗಣದಲ್ಲಿ ಲಾರ್ವಾನಾಶಕಗಳ ಬಳಕೆ ಹಾಗೂ ಒಳಾಂಗಣದಲ್ಲಿ ಡೆಂಗ್ಯೂ ನಾಶಕವನ್ನು ಸಿಂಪಡಿಸಿ ಮನೆಯ ಸದಸ್ಯರನ್ನ 30 ನಿಮಿಷಗಳ ಕಾಲ ಮನೆಯಿಂದ ಹೊರಗಡೆ ಇರುವಂತೆ ಸೂಚಿಸುವುದು
3. ಡೆಂಗ್ಯೂ ಪಾಸಿಟಿವ್ ಆದ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್‌ಗಳನ್ನು ತುರ್ತಾಗಿ ಸಕ್ರೀಯಗೊಳಿಸಬೇಕು.
4. ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಬಿಪಿಎಲ್ ಕುಟುಂಬಗಳಿಗೆ ಸೊಳ್ಳೆ ನಿರೋಧಕ, ಬೇವಿನ ಎಣ್ಣೆ ವಿತರಣೆ ಖಚಿತಪಡಿಸಿಕೊಳ್ಳುವುದು ಹಾಗೂ ಕೈ, ಕಾಲು – ಕುತ್ತಿಗೆಯ ಭಾಗದಲ್ಲಿ ಹಚ್ಚಿಕೊಳ್ಳುವಂತೆ ತಿಳಿಸುವುದು.
5. ಡೆಂಗ್ಯೂ ಪಾಸಿಟಿವ್ ಆದ ವ್ಯಕ್ತಿಯನ್ನ ಜ್ವರ ಕಾಣಿಸಿಕೊಂಡ ದಿನದಿಂದ 14 ದಿನಗಳ ಕಾಲ ಅನುಪಾಲನೆ ಮಾಡುವುದು
6. ಬೇವಿನ ಎಣ್ಣೆ ಇಲ್ಲದೇ ಹೋದರೆ ಸಿಟ್ರೋನೆಲ್ ಆಯಿಲ್, ಲೆಮನ್ ಗ್ರೇಸ್ ಆಯಿಲ್ ಅಥವಾ ಡೀಟ್ ಆಧಾರಿತ ಕ್ರೀಂ ಆಯಿಲ್‌ಗಳನ್ನ ವಿತರಣೆ ಮಾಡಬೇಕು
7. ಡೆಂಗ್ಯೂ ಪ್ರಕರಣಗಳ ನಿರ್ವಹಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಆಸ್ಫತ್ರೆಗಳಲ್ಲಿ 5 ರಿಂದ 10 ಹಾಸಿಗೆಗಳನ್ನು ಮೀಸಲಿಡಬೇಕು.
8. ಡೆಂಗ್ಯೂ ಜ್ವರ ಪ್ರಕರಣಗಳ ಪರೀಕ್ಷೆ, ಚಿಕಿತ್ಸೆ ಹಾಗೂ ನಿರ್ವಹಣಾ ಸೌಲಭ್ಯವನ್ನು ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲಾ ಆರೋಗ್ಯ ಸಂಸ್ಥೆಗಳು ಎಲ್ಲರಿಗೂ ಸಂಪೂರ್ಣ ಉಚಿತವಾಗಿ ನೀಡಬೇಕು.
9. ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಸ್ಟಿಂಗ್ ಕಿಟ್, ಅಗತ್ಯ ಪ್ರಮಾಣದ ಔಷಧಿ ಹಾಗೂ IV Fluids ಔಷಧ ದಾಸ್ತಾನು ಲಭ್ಯತೆಯನ್ನು ಖಚಿತಪಡಿಸಬೇಕು. ಜಿಲ್ಲಾವಾರು ಸರ್ಕಾರಿ ಹಾಗೂ ಖಾಸಗಿ ರಕ್ತನಿಧಿಗಳಿಂದ ಪ್ಲೇಟ್‌ಲೆಟ್, ಪ್ಲಾಸ್ಮಾ ಹಾಗೂ ಇತರ ಕಾಂಪೊನೆಂಟ್‌ಗಳ ಬಗ್ಗೆ ಪ್ರತಿದಿನ ಮಾಹಿತಿ ನೀಡಬೇಕು.
10. ಕಡ್ಡಾಯವಾಗಿ ಡೆಂಗ್ಯೂ ಜ್ವರ ನಿರ್ವಹಣೆ ಸಂಬಂಧ ಶಿಷ್ಟಾಚಾರ ಪಾಲನೆ ಮಾಡಬೇಕು.