ಆಧುನಿಕ ಜೀವನ ಶೈಲಿ ಹಾಗೂ ಪ್ರತಿನಿತ್ಯ ಸೇವಿಸುವ ಆಹಾರದಿಂದಾಗಿ ಯುವ ಜನಾಂಗದವರಲ್ಲೂ ಕಿಡ್ನಿ ಸ್ಟೋನ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಕಿಡ್ನಿ ಸ್ಟೋನ್ ಎಂದರೆ ಯಾವಾಗ ಮೂತ್ರದಲ್ಲಿ ಅಧಿಕವಾಗಿ ಲವಣಾಂಶಗಳು ಶೇಖರಣೆ ಆಗುತ್ತದೆಯೋ ಅದು ಸ್ಫಟಿಕ ರೂಪಕ್ಕೆ ಮಾರ್ಪಟ್ಟು ಘನ ವಸ್ತುವಾಗಿ ರೂಪಗೊಳ್ಳುವುದಾಗಿದೆ.
ಮೂತ್ರದಲ್ಲಿನ ಅಂಶಗಳಿಂದ ರೂಪುಗೊಳ್ಳುವ ಈ ಕಲ್ಲು ಒಂದು ಮರಳಿನ ಕಣದಿಂದ ಹರಳುಗಳ ಗಾತ್ರದವರೆಗೂ ಬೆಳೆಯುತ್ತವೆ. ಈ ಕಲ್ಲುಗಳು ಮೂತ್ರನಾಳದಲ್ಲಿ ಸೇರಿಕೊಂಡು ಮೂತ್ರ ಹರಿವನ್ನು ನಿರ್ಬಂಧಿಸಿದರೆ ಆಗ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಹೋಗಲಾಡಿಸಲು ವೈದ್ಯರ ಸಲಹೆ ಜೊತೆಗೆ ಕೆಲವು ಮನೆ ಮದ್ದನ್ನು ಅನುಸರಿಸಿ.
Advertisement
Advertisement
ತುಳಸಿ: ತುಳಸಿಯಲ್ಲಿರುವ ಮೂತ್ರವರ್ಧಕ ಗುಣ ಮತ್ತು ಕಲ್ಮಶ ನಿವಾರಕಗಳ ಗುಣಗಳು ಮೂತ್ರಪಿಂಡದಲ್ಲಿನ ಕಲ್ಲುಗಳನ್ನು ಹೊರಹಾಕಲು ನೆರವಾಗುತ್ತದೆ. ಅಷ್ಟೇ ಅಲ್ಲದೇ ತುಳಸಿ ಎಲೆಗಳ ರಸದಲ್ಲಿ ಅಸೆಟಿಕ್ ಆಮ್ಲವಿದ್ದು, ಈ ಆಮ್ಲದಿಂದಾಗಿ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ.
Advertisement
Advertisement
ಕಲ್ಲಂಗಡಿ ಬೀಜ: ನಿಮ್ಮ ಕಿಡ್ನಿ ಸ್ಟೋನ್ ಅನ್ನು ಹೊರಹಾಕಲು ಕಲ್ಲಂಗಡಿ ಮತ್ತು ಅದರ ಬೀಜ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಒಂದು ಲೀಟರ್‍ನಷ್ಟು ನೀರನ್ನು ಕುದಿಸಿಕೊಳ್ಳಿ ಹಾಗೂ ಬೀಜವನ್ನು ಪೇಸ್ಟ್ ರೂಪದಲ್ಲಿ ತಯಾರಿಸಿಕೊಂಡು ಈ ನೀರಿಗೆ ಮಿಶ್ರ ಮಾಡಿ. ಅರ್ಧ ಗಂಟೆಗಳ ಕಾಲ ಈ ನೀರನ್ನು ಕುದಿಸಿ ನಂತರ ತಣಿಸಿ ಕುಡಿಯುವರಿಂದ ಕಿಡ್ನಿ ಸ್ಟೋನ್ ನಿವಾರಣೆಯಾಗಿ ನೋವಿನಿಂದಲೂ ಮುಕ್ತಿ ಪಡೆಯುತ್ತಿರಿ.
ಬಾಳೆ ದಿಂಡು ಜ್ಯೂಸ್: ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರು ನಿತ್ಯವೂ ಬಾಳೆ ದಿಂಡು ಜ್ಯೂಸ್ ಅನ್ನು ಕುಡಿಯಿರಿ. ಹಾಗೂ ಇದರ ಜೊತೆಗೆ ದೇಹಕ್ಕೆ ನಿಯಮಿತಕ್ಕಿಂತಲೂ ಅಧಿಕವಾಗಿ ನೀರನ್ನು ಕುಡಿಯಿರಿ. ಇದರಿಂದಾಗಿ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಇದನ್ನೂ ಓದಿ: ಬೇಸಿಗೆಯಲ್ಲಿ ಕಾಮಕಸ್ತೂರಿ ಬೀಜ ಬಲು ಆರೋಗ್ಯಕಾರಿ
ಆ್ಯಪಲ್ ಸಿಡರ್ ವಿನೆಗರ್: ಒಂದು ಅಥವಾ ಎರಡು ಟೇಬಲ್ ಸ್ಪೂನ್‍ಗಳಷ್ಟು ಆ್ಯಪಲ್ ಸಿಡರ್ ವಿನೆಗರ್‍ಗೆ ಒಂದಿಷ್ಟು ನೀರನ್ನು ಬೆರೆಸಿ ಅದನ್ನು ಪ್ರತಿನಿತ್ಯ ಕುಡಿಯಿರಿ. ಇದರಿಂದಾಗಿ ಮೂತ್ರಪಿಂಡದಲ್ಲಿ ಆಗಿರುವ ಕಲ್ಲನ್ನು ಕರಗಿಸಲು ಸಹಾಯವಾಗುತ್ತದೆ. ಇದನ್ನೂ ಓದಿ: ನೋಡಲು ಪುಟ್ಟದಾಗಿರುವ ನೆಲನೆಲ್ಲಿಯಿಂದ ಬೆಟ್ಟದಷ್ಟು ಪ್ರಯೋಜನ