ನವದೆಹಲಿ: ಆರ್ಥಿಕ ಕಾರಣಗಳಿಂದ ಕೂಡಲೇ ಆಶಾ ಕಾರ್ಯಕರ್ತರ ಸಂಬಳ ಹೆಚ್ಚು ಮಾಡಲು ಸಾಧ್ಯವಿಲ್ಲ. ಸಿಎಂ ಯಡಿಯೂರಪ್ಪ ಅವರ ಜೊತೆಗೆ ಮಾತನಾಡಿ ಸಂಬಳ ಹೆಚ್ಚಿಸುವ ಬಗ್ಗೆ ಚರ್ಚಿಸುತ್ತೇನೆ ಎಂದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತಯರು ಪ್ರತಿಭಟನೆ ಹಿನ್ನೆಲೆ ನವದೆಹಲಿಯಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತಯರ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುತ್ತಿದ್ದೇವೆ. ಈ ಮೊದಲು 5500 ರೂ. ಸಂಬಳ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಬಂದ್ಮೇಲೆ ಅದನ್ನು 6,000 ರೂ. ಮಾಡಿದ್ದೇವೆ. ಸಿಎಂ ಜೊತೆಗೆ ಚರ್ಚಿಸಿ ಸಂಬಳವನ್ನು 7,000 ರೂ. ಮಾಡುವ ಪ್ರಯತ್ನ ಮಾಡುತ್ತೇನೆ. ಪಕ್ಕದ ಆಂಧ್ರ ಪ್ರದೇಶದಲ್ಲಿ 10,000 ರೂ. ನೀಡಲಾಗುತ್ತಿದೆ. ಸದ್ಯ ಆಶಾ ಕಾರ್ಯಕರ್ತೆಯರು 12,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇಷ್ಟು ಪ್ರಮಾಣದಲ್ಲಿ ಸಂಬಳ ನೀಡಲು ಸಾಧ್ಯವಿಲ್ಲ ಹಣಕಾಸು ಇಲಾಖೆಯ ಜೊತೆಗೂ ಸಭೆ ಮಾಡಬೇಕು ಎಂದರು.
Advertisement
Advertisement
ಈ ಸಂಬಂಧ ಎರಡು ದಿನಗಳ ಹಿಂದೆ ಅಧಿಕಾರಿಗಳ ಹಂತದಲ್ಲಿ ಸಭೆ ನಡೆಸಲಾಗಿದೆ. ಪ್ರತಿಭಟನಾಕಾರರ ಮುಖಂಡರ ಜೊತೆಗೂ ಮಾತುಕತೆ ಮಾಡಿದೆ. ಅವರು ಹತ್ತು ಬೇಡಿಕೆಗಳ ಪೈಕಿ ಏಳು ಬೇಡಿಕೆಗೆ ಒಪ್ಪಿಗೆ ನೀಡಿದೆ. ಆಶಾ ಕಾರ್ಯಕರ್ತರ ಪ್ರತಿಭಟನೆ ಪೂರ್ವ ನಿಗದಿಯಾಗಿತ್ತು. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ರಾಜ್ಯದಲ್ಲಿ ಉತ್ತಮ ಕೆಲಸ ಮಾಡ್ತಿದ್ದಾರೆ. ಅವರು ನಮ್ಮ ತಾಯಂದಿರ ರೀತಿ, ಅವರ ಬೇಡಿಕೆಗೆ ನಾನು ನಮ್ಮ ಸರ್ಕಾರ ಸದಾ ಸ್ಪಂದಿಸಲು ಸಿದ್ಧವಾಗಿದೆ ಎಂದು ರಾಮುಲು ಭರವಸೆ ನೀಡಿದರು.
Advertisement
Advertisement
ಆಯುಷ್ಮಾನ್ ಭಾರತ ಯೋಜನೆಯಡಿ ಬಿಪಿಎಲ್ ಕಾರ್ಡ್ ನೀಡಲು ಕೇಳಿದ್ದನ್ನು ಒಪ್ಪಿದ್ದೇವೆ. ಆಶಾ ಕಾರ್ಯಕರ್ತರಿಗೆ ಫೋರ್ಟಲ್ ನಲ್ಲಿ ಮಾಹಿತಿ ನೀಡಲು ಹೇಳಿದ್ದೇನೆ. ಎಎನ್‍ಎಂ ಗಳು ತಕ್ಷ ತಕ್ಷಣ ಮಾಹಿತಿ ನೀಡಲು ಸೂಚನೆ ನೀಡಿದ್ದೇನೆ. 6 ಸಾವಿರ ರೂ.ಗಳನ್ನು ಏಕಕಾಲಕ್ಕೆ ಸಂಬಳ ನೀಡಲು ಸೂಚನೆ ನೀಡಲಾಗಿದೆ. ಆಶಾ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸಲು ವಾಟ್ಸಪ್ ಗ್ರೂಪ್ ಕೂಡ ಮಾಡಲಾಗಿದೆ. ಇಡೀ ರಾಜ್ಯದ ಆಶಾ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸಲು ಸರ್ಕಾರ ಸಿದ್ಧವಿದೆ. ದಯಮಾಡಿ ಎಲ್ಲ ಆಶಾ ಕಾರ್ಯಕರ್ತರು, ತಾಯಂದಿರು ಪ್ರತಿಭಟನೆ ಹಿಂಪಡೆಯಬೇಕು ಎಂದು ಅವರು ಮನವಿ ಮಾಡಿದರು.