ಮಡಿಕೇರಿ: ಜಿಲ್ಲಾಸ್ಪತ್ರೆಯಲ್ಲಿ ಇರುವ ಸಮಸ್ಯೆ, ಕುಂದುಕೊರತೆಗಳನ್ನು ಅರಿಯಲು ಸ್ವತಃ ಆರೋಗ್ಯ ಸಚಿವ ಶ್ರೀರಾಮುಲು ಚಾಮರಾಜನಗರದ ಬಳಿಕ ಮಡಿಕೇರಿಯಲ್ಲಿ ಆಸ್ಪತ್ರೆ ವಾಸ್ತವ್ಯ ಮಾಡಿದ್ದಾರೆ. ರೋಗಿಗಳ ಸಮಸ್ಯೆಗಳನ್ನು ಹತ್ತಿರದಿಂದ ತಿಳಿಯಲು ಆಸ್ಪತ್ರೆಯಲ್ಲಿ ತಂಗಿದ್ದಾರೆ.
ಬೆಳಗ್ಗೆ ಎದ್ದು ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿ, ತಾವು ಉಳಿದಿದ್ದ ಕೊಠಡಿಯಲ್ಲೇ ಸಚಿವರು ಶಿವಪೂಜೆ ನೆರವೇರಿಸಿದ್ದಾರೆ. ಪೂಜೆಯ ಬಳಿಕ ಆಸ್ಪತ್ರೆ ಆವರಣದಲ್ಲಿ ಶ್ರೀರಾಮುಲು ಅವರು ಸಿಬ್ಬಂದಿ ಜೊತೆ ಕುಂದುಕೊರತೆ ಸಭೆ ನಡೆಸಿದ್ದು, ಶುಶ್ರೂಷಕರು, ಡಿ ದರ್ಜೆ ನೌಕರರ ಸಮಸ್ಯೆಗಳನ್ನು ಆಲಿಸಿದರು. ಜೊತೆಗೆ ಸೇವಾಭದ್ರತೆ, ಸಂಬಳದ ಕೊರತೆ ಬಗ್ಗೆ ಸಚಿವರಲ್ಲಿ ಶುಶ್ರೂಷಕಿಯರು ಮನವಿ ಮಾಡಿದರು. ಇದನ್ನೂ ಓದಿ:ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ ಶ್ರೀರಾಮುಲು
ಆಸ್ಪತ್ರೆಯ ಒಳರೋಗಿಗಳ ಬಳಿ ತೆರೆಳಿ ಆರೋಗ್ಯವನ್ನು ವಿಚಾರಿಸಿದ ಬಳಿಕ ಮಾತಾನಾಡಿದ ಸಚಿವರು, ಯಾವುದೇ ಸರ್ಕಾರ ಬರಲಿ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆ ಒಂದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ರೆ ಮಾತ್ರ ಯಶಸ್ವಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತೆ. ಆದ್ದರಿಂದ ಈ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುತ್ತೆ. ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಮತ್ತು ಸಿಬ್ಬಂದಿಗಳ ಕೊರತೆ ಇದೆ ಎಂದು ಗಮನಿಸಿದ್ದೇನೆ ಎಂದರು. ಇದನ್ನೂ ಓದಿ:ಲಘು ಹೃದಯಾಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದ ಮಹಿಳೆಗೆ ನೆರವಾದ ಶ್ರೀರಾಮುಲು
ಕಾಯಕವೇ ಕೈಲಾಸ….
ಆಸ್ಪತ್ರೆ ವಾಸ್ತವ್ಯದ ಕಾಯಕ ಮುಂದುವರಿಸಿದ್ದೇನೆ.
ನಮ್ಮೆಲ್ಲರಿಗೆ ಮಾತೆಯಾಗಿರುವ ಕಾವೇರಿಗೆ ಮಡಿಲಾಗಿರುವ ಕೊಡಗಿನ (ಮಡಿಕೇರಿ) ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ
ವೈದ್ಯರು, ಅಲ್ಲಿನ ಸಿಬ್ಬಂದಿ, ರೋಗಿಗಳು ಮತ್ತು ಅವರ ಸಂಬಂಧಿಕರೊಂದಿಗೆ ಆಸ್ಪತ್ರೆಯ ಪರಿಸ್ಥಿತಿ ಬಗ್ಗೆ ಚರ್ಚಿಸಿದೆ. 1/2 pic.twitter.com/3lzLucX8QG
— B Sriramulu (@sriramulubjp) September 26, 2019
ಈಗಾಗಲೇ ವೈದ್ಯರ ನೇಮಕಾತಿ ಪ್ರಕ್ರಿಯೆ ಆಗುತ್ತಿದೆ. ಆದಷ್ಟು ಬೇಗ ಪ್ರಕ್ರಿಯೆ ಮುಗಿದ ಬಳಿಕ ಎಲ್ಲೆಲ್ಲಿ ಸೌಲಭ್ಯಗಳು ಬೇಕು ಅಲ್ಲಿಗೆ ಸೌಲಭ್ಯ ನೀಡಲು ಮುಂದಾಗುತ್ತೇವೆ ಎಂದು ತಿಳಿಸಿದರು. ಇದೇ ಸಂದರ್ಭ ಮಡಿಕೇರಿ ವಿರಾಜಪೇಟೆ ಶಾಸಕರು ಅಪ್ಪಚ್ಚು ರಂಜನ್, ಕೆ.ಜಿ ಬೋಪ್ಪಯ್ಯ ಗುರುವಾರದಿಂದಲೂ ಸಚಿವರೊಂದಿಗೆ ಇಲ್ಲದೇ ಇರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.