LatestLeading NewsMain PostNational

ಹಿಜಬ್ ನಿಷೇಧದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ: ಸಿಜೆಐ

Advertisements

ನವದೆಹಲಿ: ಶಾಲಾ ಕಾಲೇಜು ತರಗತಿಗಳಲ್ಲಿ ಹಿಜಬ್ ಬ್ಯಾನ್ ಮಾಡಿದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ವಿಳಂಬವಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್.ವಿ.ರಮಣ ಹೇಳಿದ್ದಾರೆ.

ಪ್ರಕರಣದ ವಿಚಾರಣೆ ಬಗ್ಗೆ ಇಂದು ಹಿರಿಯ ವಕೀಲೆ ಮೀನಾಕ್ಷಿ ಅರೋರಾ ಪ್ರಸ್ತಾಪಿಸಿದ ವೇಳೆ ನ್ಯಾಯಮೂರ್ತಿಗಳು ಹೀಗೆ ಅಭಿಪ್ರಾಯಪಟ್ಟಿದ್ದಾರೆ. ಈ ಅರ್ಜಿಯ ವಿಚಾರಣೆ ಆರಂಭಿಸಬೇಕಿತ್ತು, ಆದರೆ ವಿಚಾರಣೆ ನಡೆಸಬೇಕಿದ್ದ ನ್ಯಾಯಾಧೀಶರ ಪೈಕಿ ಓರ್ವರು ಅನಾರೋಗ್ಯಕ್ಕಿಡಾಗಿದ್ದಾರೆ. ಹೀಗಾಗಿ ವಿಚಾರಣೆ ವಿಳಂಬವಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಬಳಿಕ ವಿಶೇಷ ಪೀಠ ರಚನೆ ಮಾಡಲಾಗುವುದು ಎಂದು ಸಿಜೆಐ ಹೇಳಿದರು. ಇದನ್ನೂ ಓದಿ: ರಾಜ್ಯ ಹಾಳು ಮಾಡಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ: ಅರಗ 

Karnataka hijab controversy reaches SC, CJI NV Ramana says 'let HC decide'

ಕನಿಷ್ಠ ವಿಚಾರಣೆಗೆ ದಿನಾಂಕ ನಿಗಧಿಯಾದರೂ ಮಾಡಿ ಎಂದು ಮೀನಾಕ್ಷಿ ಅರೋರಾ ಮನವಿ ಮಾಡಿದರು. ಆದರೆ ಅದಕ್ಕೂ ಸಿಜೆಐ ನಿರಾಕರಿಸಿದರು. ಕಳೆದ ವಿಚಾರಣೆಯಲ್ಲಿ ಜುಲೈನಲ್ಲಿ ವಿಚಾರಣೆಗೆ ಪ್ರಕರಣವನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು.

ಶಾಲಾ ಕಾಲೇಜುಗಳ ತರಗತಿಯಲ್ಲಿ ಹಿಜಬ್ ಧರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶ ನೀಡಿತ್ತು. ಈ ಆದೇಶ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಹಿಜಾಬ್ ಇಸ್ಲಾಂದ ಮೂಲಭೂತ ಅವಶ್ಯಕತೆ ಅಲ್ಲ ಎಂದು ಹೇಳಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಇದನ್ನೂ ಓದಿ: ಝವಾಹಿರಿಗೆ ಆಶ್ರಯ ನೀಡುವ ಮೂಲಕ ತಾಲಿಬಾನ್ ದೋಹಾ ಒಪ್ಪಂದ ಉಲ್ಲಂಘಿಸಿದೆ: ಆಂಟನಿ ಬ್ಲಿಂಕೆನ್

Live Tv

Leave a Reply

Your email address will not be published.

Back to top button