ಬೆಂಗಳೂರು: ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ (ಶುಕ್ರವಾರ) ಮುಂದೂಡಿದೆ.
ನಿರೀಕ್ಷಣಾ ಜಾಮೀನು ಕೋರಿ ವಕೀಲರ ಮೂಲಕ ಮಧ್ಯಾಹ್ನ ಹೆಚ್.ಡಿ.ರೇವಣ್ಣ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಎಫ್‌ಐಆರ್‌ನಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗುತ್ತದೆ. ನೀವು ವಿಚಾರಣಾ ನ್ಯಾಯಾಲಯದಲ್ಲಿ ನೇರವಾಗಿ ಹಾಜರಾಗಬಹುದಿತ್ತಲ್ಲಾ? ಹೆಚ್.ಡಿ.ರೇವಣ್ಣ ಪರ ಹಿರಿಯ ವಕೀಲರಿಗೆ ಕೋರ್ಟ್ ಪ್ರಶ್ನೆ ಮಾಡಿತು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಹಿಂಪಡೆಯಲು ಕೋರ್ಟ್‌ನಿಂದ ಯಾವುದೇ ಆದೇಶ ಬಂದಿಲ್ಲ: MEA
ವಿಚಾರಣೆ ನಡೆಸಿ ಕೋಟ್, ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿದೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚನೆ ನೀಡಿದೆ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಎಸ್‌ಐಟಿ ಸಲ್ಲಿಸಿದ ಅರ್ಜಿಯ ವಿವರ ಇನ್ನೂ ಲಭ್ಯವಿಲ್ಲ. ಮಧ್ಯಂತರ ಜಾಮೀನು ನೀಡಲು ಹೆಚ್.ಡಿ.ರೇವಣ್ಣ ಪರ ವಕೀಲರ ಮನವಿ ಮಾಡಿದ್ದಾರೆ ಎಂದು ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಾಸ್ ರೇಪಿಸ್ಟ್ ಪರ ಪ್ರಧಾನಿ ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ: ರಾಹುಲ್ ಗಾಂಧಿ