ಮುಂಬೈ: ಖ್ಯಾತ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ (Stand up comedian Kunal Kamra) ಅವರು ಮುಂಬೈ ಪೊಲೀಸರು (Mumbai Police) ದಾಖಲಿಸಿದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್‌ಗೆ (Bombay Highcourt) ಅರ್ಜಿ ಸಲ್ಲಿಸಿದ್ದಾರೆ.
ಕುನಾಲ್ ಕಾಮ್ರಾ ತಮ್ಮ ಇತ್ತೀಚಿನ ಸ್ಟ್ಯಾಂಡ್-ಅಪ್ ಕಾಮಿಡಿ ಕಾರ್ಯಕ್ರಮ `ನಯಾ ಭಾರತ್’ನಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರನ್ನು ಪರೋಕ್ಷವಾಗಿ `ಗದ್ದಾರ್’ (ದ್ರೋಹಿ) ಎಂದು ಕರೆದಿದ್ದರು. ಈ ಪ್ರದರ್ಶನವು ಮುಂಬೈನ ಖಾರ್ ಪ್ರದೇಶದ ಹ್ಯಾಬಿಟ್ಯಾಟ್ ಸ್ಟುಡಿಯೋದಲ್ಲಿ ನಡೆದಿದ್ದು, ಇದರ ವೀಡಿಯೋ ಯೂಟ್ಯೂಬ್‌ನಲ್ಲಿ ಪ್ರಕಟವಾದ ನಂತರ ವೈರಲ್ ಆಗಿತ್ತು. ಇದನ್ನೂ ಓದಿ: ಕಚ್ಚಾ ತೈಲ ದರ ಭಾರೀ ಇಳಿಕೆ- ಭಾರತದಲ್ಲೂ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುತ್ತಾ?
ಈ ಘಟನೆಯ ಬಳಿಕ, ಶಿವಸೇನೆ ಶಾಸಕ ಮುರ್ಜಿ ಪಟೇಲ್ ಅವರು ಕಾಮ್ರಾ ವಿರುದ್ಧ ದೂರು ದಾಖಲಿದ್ದರು. ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353(1)(ಬಿ) (ಸಾರ್ವಜನಿಕ ಶಾಂತಿಭಂಗಕ್ಕೆ ಕಾರಣವಾಗುವ ಹೇಳಿಕೆ) ಮತ್ತು 356(2) (ಮಾನಹಾನಿ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: ಕಳೆದು ಹೋಗ್ತಿವಿ ಅನ್ನೋ ಭಯದಲ್ಲಿ ಬಿಜೆಪಿಯವ್ರು ಜನಾಕ್ರೋಶ ಯಾತ್ರೆ ಮಾಡ್ತಿದ್ದಾರೆ: ಪರಮೇಶ್ವರ್ ಲೇವಡಿ
ವಿವಾದ ತಾರಕಕ್ಕೇರಿದ ನಂತರ ಕಾಮ್ರಾ ತಮಿಳುನಾಡಿನಲ್ಲಿ ಇರುವ ಕಾರಣ ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಮಾ. 28ರಂದು ಮದ್ರಾಸ್ ಹೈಕೋರ್ಟ್ ಅವರಿಗೆ ಏ. 7ವರೆಗೆ ಮಧ್ಯಂತರ ಪೂರ್ವಭಾವಿ ಜಾಮೀನು ಮಂಜೂರು ಮಾಡಿತ್ತು. ಆದರೆ, ಈ ಅವಧಿ ಮುಗಿದ ನಂತರ, ಕಾಮ್ರಾ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ರದ್ದುಗೊಳಿಸಲು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದು ಏ. 21ರಂದು ನ್ಯಾ.ಸಾರಂಗ್ ಕೊತ್ವಾಲ್ ಮತ್ತು ಶ್ರೀರಾಮ್ ಎಂ. ಮೊದಕ್ ಅವರ ಪೀಠದ ಮುಂದೆ ವಿಚಾರಣೆಗೆ ಬರಲಿದೆ. ಇದನ್ನೂ ಓದಿ: Bengaluru | ಕುಟುಂಬ ಕಲಹದಿಂದ ಮಾನಸಿಕವಾಗಿ ನೊಂದು ಟೆಕ್ಕಿ ಆತ್ಮಹತ್ಯೆ
ಎಫ್‌ಐಆರ್ ತಮ್ಮ ಮೂಲಭೂತ ಹಕ್ಕುಗಳಾದ ಅಭಿವ್ಯಕ್ತಿ ಸ್ವಾತಂತ್ರ‍್ಯ (ವಿಧಿ 19(1)(ಎ)), ಯಾವುದೇ ವೃತ್ತಿ ಅಥವಾ ವ್ಯಾಪಾರ ನಡೆಸುವ ಹಕ್ಕು (ವಿಧಿ 19(1)(ಜಿ)), ಮತ್ತು ಜೀವನ ಮತ್ತು ಸ್ವಾತಂತ್ರ‍್ಯದ ಹಕ್ಕು (ವಿಧಿ 21)ಗಳನ್ನು ಉಲ್ಲಂಘಿಸುತ್ತದೆ ಎಂದು ತಮ್ಮ ಅರ್ಜಿಯಲ್ಲಿ ಕುನಾಲ್ ಕಾಮ್ರಾ ಉಲ್ಲೇಖಿಸಿದ್ದಾರೆ.