ರಾಮನಗರ: ರಾಮದೇವರ ಬೆಟ್ಟವು (RamaDevra Betta) ಅನೇಕ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹೀಗಾಗಿ ಜೀರ್ಣೋದ್ಧಾರ ಅಭಿವೃದ್ಧಿಗೆ ಡಿಪಿಆರ್ ಸಿದ್ಧ ಪಡಿಸಲಾಗುತ್ತಿದೆ. ಈ ಯೋಜನೆಯನ್ನು ಯಾರು ನಿಲ್ಲಿಸಲು ಸಾಧ್ಯವಿಲ್ಲ ಎಂದು ರಾಮನಗರದಲ್ಲಿ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ (Dr. Ashwathnarayan) ತಿಳಿಸಿದ್ದಾರೆ.
Advertisement
ರಾಮದೇವರ ಬೆಟ್ಟ ಅಭಿವೃದ್ಧಿ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮನ ಹೆಸರು ಕೇಳಿದ್ರೆ ಕೆಲವರಿಗೆ ನಡುಕ ಶುರುವಾಗುತ್ತೆ. ರಾಮನಗರದಲ್ಲಿ ಈವರೆಗೂ ರಾಮದೇವರ ಬೆಟ್ಟ ಅಭಿವೃದ್ಧಿ ಆಗಿಲ್ಲ. ಕೆಲವರು ಅಸಹಾಯಕರಾಗಿದ್ದಾರೆ. ಬೇರೆ ಪಕ್ಷದ ಯಾರೊಬ್ಬರು ಬೆಟ್ಟ ನೋಡಿಲ್ಲ. ರಾಮಜನ್ಮ ಭೂಮಿ ಬಿಟ್ಟರೆ, ರಾಮನಗರದ ರಾಮದೇವರ ಬೆಟ್ಟ ಮತ್ತೊಂದು ಪವಿತ್ರ ಕ್ಷೇತ್ರವಾಗಲಿದೆ. ಎಲ್ಲಾ ಸೂಕ್ಷ್ಮತೆಗಳನ್ನು ಗಮನಿಸಿ ಕಾನೂನಿನ ಚೌಕಟ್ಟಿನ ಪರಿದಿಯೊಳಗೆ ರಾಮದೇವರ ಬೆಟ್ಟ ಅಭಿವೃದ್ಧಿ ಮಾಡಿಯೇ ತಿರುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಹೇಳೋದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ: ಬಿಕೆ ಹರಿಪ್ರಸಾದ್ ಕಿಡಿ
Advertisement
Advertisement
ಡಿ.ಕೆ.ಶಿವಕುಮಾರ್ (D.K Shivakumar) ಸಿಡಿ ಮಾಡಿಸಿದ್ದರು ಎಂದು ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿಕೆ ಬಗ್ಗೆ ಮಾತನಾಡಿದ ಸಚಿವರು, ಈ ಬಗ್ಗೆ ತನಿಖೆ ನಡೆದು ಸತ್ಯಾಂಶ ಹೊರಬರಬೇಕು. ಷಡ್ಯಂತ್ರ ಮಾಡುವವರು, ಬ್ಲಾಕ್ ಮೇಲರ್ಗಳಿಗೆ ತಕ್ಕ ಪಾಠ ಕಲಿಸುವ ಕೆಲಸ ಆಗಬೇಕು. ಈ ಬಗ್ಗೆ ಜಾರಕಿಹೊಳಿ ಸಹ ತನಿಖೆ ನಡೆಸಿ ಎಂದಿದ್ದಾರೆ. ಅದನ್ನು ಸ್ವಾಗತಿಸುತ್ತೇನೆ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೋದಿ ಪದೇ ಪದೇ ರಾಜ್ಯಕ್ಕೆ ಬರುವುದರಿಂದ JDS, ಕಾಂಗ್ರೆಸ್ಗೆ ಭಯ ಶುರುವಾಗಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ
Advertisement
ಸಚಿವ ಸುಧಾಕರ್ ಆರೋಗ್ಯ ಇಲಾಖೆಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ (Siddaramaiah) ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ಚರ್ಚೆ ಮಾಡಲು ಸದನ ಇದೆ. ಕಮಿಟಿ ಇದೆ. ಅಲ್ಲಿ ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕಿತ್ತು. ಅದನ್ನು ಬಿಟ್ಟು ನಿರಾಧಾರವಾಗಿ ಆರೋಗ್ಯ ಇಲಾಖೆಯಲ್ಲಿ ಹಗರಣ ನಡೆದಿದೆ ಎಂದು ಹೇಳಿಕೆ ನೀಡುವುದು ಸರಿ ಅಲ್ಲ. ಮೈ ಪರಚಿಕೊಂಡು ಅಪದಾನೆ ಮಾಡಿದ್ರೆ ಸುಳ್ಳು ಸತ್ಯವಾಗುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k