ಹೈದರಾಬಾದ್: ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯನಿಗೂ ಹೃದಯಾಘಾತವಾಗಿ ಇಬ್ಬರೂ ಸಾವನ್ನಪಿರುವ ಘಟನೆ ನಡೆದಿದೆ.
ಲಕ್ಷ್ಮಣ್, ಸರ್ಜು ಮೃತರಾಗಿದ್ದಾರೆ. ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯನೂ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. ತೆಲಂಗಾಣದ ಕಾಮಾರೆಡ್ಡಿಯ ಜಿಲ್ಲೆಯ ಗಾಂಧಾರಿ ಮಂಡಲದ ಗುಜ್ಜುತಾಂಡ ಎಂಬ ಪ್ರದೇಶಕ್ಕೆ ಸೇರಿದ ಸರ್ಜು ಎಂಬಾತನಿಗೆ ಹೃದಯಾಘಾತವಾಗಿತ್ತು. ಕುಟುಂಬಸ್ಥರು ತಕ್ಷಣ ಆತನನ್ನು ಗಾಂಧಾರಿ ಪ್ರದೇಶಲ್ಲಿರುವ ಖಾಸಗಿ ನಸಿರ್ಂಗ್ ಹೋಮ್ಗೆ ಕರೆ ತಂದಿದ್ದರು. ಇದನ್ನೂ ಓದಿ: ಕಟೀಲ್ ಅಸಂಬದ್ಧ ಹೇಳಿಕೆ ನೀಡ್ತಾನೆ: ಏಕವಚನದಲ್ಲಿ ಸತೀಶ್ ಜಾರಕಿಹೊಳಿ ವಾಗ್ದಾಳಿ
Advertisement
Advertisement
ಖಾಸಗಿ ನಸಿರ್ಂಗ್ ಹೋಮ್ನಲ್ಲಿ ರೋಗಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯ ಲಕ್ಷ್ಮಣ್ ಅವರಿಗೂ ಹೃದಯಾಘಾತವಾಗಿದ್ದೂ, ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಮಧ್ಯೆ, ರೋಗಿಯ ಸಂಬಂಧಿಕರು ತಕ್ಷಣ ಸರ್ಜು ಅವರನ್ನು ಕಾಮರೆಡ್ಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ರೋಗಿ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ಅಪ್ಪು ಚಿತ್ರದ ದೃಶ್ಯಗಳನ್ನ ವೇದಿಕೆಯಲ್ಲಿ ಮರುಸೃಷ್ಟಿದ ಕಿರುತರೆ ಕಲಾವಿದರ ತಂಡ
Advertisement
Advertisement
ಡಾ.ಲಕ್ಷ್ಮಣ್ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದ ಕಾಮರೆಡ್ಡಿ ನಿವಾಸಿಗಳು ಆಸ್ಪತ್ರೆಯ ಬಳಿ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಸದಾ ಆರೋಗ್ಯವಂತರಾಗಿ ಕಾಣುತ್ತಿದ್ದ ಯುವ ವೈದ್ಯನ ಸಾವಿನಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.