ಯಾದಗಿರಿ: ಜಿಲ್ಲೆಯ ಗುರುಮಠಕಲ್‌ನ (Gurumatakal) ಮಾಜಿ ಶಾಸಕ ನಾಗನಗೌಡ ಕಂದಕೂರು (Naganagouda Kandkur) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ನಾಗನಗೌಡ ಕಂದಕೂರು (79) ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಗುರುಮಠಕಲ್‌ನ ಹಾಲಿ ಶಾಸಕ ಶರಣಗೌಡ ಕಂದಕೂರು ಅವರ ತಂದೆಯಾಗಿರುವ ನಾಗನಗೌಡ ಕಂದಕೂರು 2018ರಲ್ಲಿ ಗುರುಮಠಕಲ್ ಕ್ಷೇತ್ರದಿಂದ ಜೆಡಿಎಸ್ (JDS) ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಇವರ ನಿಧನ ಸುದ್ದಿ ತಿಳಿದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅಭಿಮಾನಿ ಬಳಗ ಆಸ್ಪತ್ರೆಗೆ ಧಾವಿಸಿದೆ. ಇದನ್ನೂ ಓದಿ: ಸ್ನೇಹಿತನ ಮೇಲೆ ಹಲ್ಲೆ – ಪ್ರಶ್ನೆ ಮಾಡಿದಕ್ಕೆ ಕುಚಿಕುಗಳಿಂದಲ್ಲೇ ಕೊಲೆ
Advertisement
Advertisement
ಭಾನುವಾರ (ಜ.28) ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ 11 ಗಂಟೆಗೆ ಹೃದಯಾಘಾತ (Heart Attack) ಸಂಭವಿಸಿ ಸಾವನ್ನಪ್ಪಿದ್ದಾರೆ. ನಾಗನಗೌಡ ಕಂದಕೂರು ವಿಧಿವಶ ಹಿನ್ನೆಲೆ ಶಾಸಕ ಶರಣಗೌಡ ಕಂದಕೂರು ತಂದೆಯ ಪಾರ್ಥಿವ ಶರೀರವನ್ನು ಅಂಬುಲೆನ್ಸ್‌ನಲ್ಲಿ ಯಾದಗಿರಿ (Yadgiri) ನಗರದ ಮನೆಗೆ ತೆಗೆದುಕೊಂಡು ಬಂದಿದ್ದಾರೆ. ಇದನ್ನೂ ಓದಿ: ಕಲ್ಕಾಜಿ ದೇಗುಲದಲ್ಲಿ ವೇದಿಕೆ ಕುಸಿದುಬಿದ್ದು ಮಹಿಳೆ ಸಾವು – 17 ಮಂದಿಗೆ ಗಾಯ
Advertisement
Advertisement
ಪಾರ್ಥಿವ ಶರೀರ ಮನೆಗೆ ಬರುತ್ತಿದ್ದಂತೆ ಕುಟುಂಬಸ್ಥರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿದೆ. ಪತಿಯ ಮೃತದೇಹವನ್ನು ಕಂಡು ಪತ್ನಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ತಾಯಿಯ ಸ್ಥಿತಿ ಕಂಡು ಶಾಸಕ ಶರಣಗೌಡ ಕಂದಕೂರು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಇದನ್ನೂ ಓದಿ: ಹನುಮಧ್ವಜ ಕೆಳಗಿಳಿಸಿದ ಪೊಲೀಸರು – ಸ್ಥಳೀಯರ ಮೇಲೆ ಲಾಠಿ ಚಾರ್ಜ್, ಕೆರಗೋಡು ಗ್ರಾಮ ಉದ್ವಿಗ್ನ