ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲದಿಂದ ಬಂಧನಕ್ಕೊಳ್ಳಪಟ್ಟಿರುವ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ದೆಹಲಿಯ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ನಿರ್ದೇಶನಗಳನ್ನು ಕೋರಿ ಅರ್ಜಿ ಸಲ್ಲಿಸಿದ್ದ ಆಮ್ ಆದ್ಮಿ ಪಕ್ಷದ (AAP) ಮಾಜಿ ಶಾಸಕರನ್ನು ದೆಹಲಿ ಹೈಕೋರ್ಟ್ (Delhi High Court) ಸೋಮವಾರ ಟೀಕಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸುಬ್ರಮೋನಿಯಂ ಪ್ರಸಾದ್ ನೇತೃತ್ವದ ಪೀಠ ಅರ್ಜಿದಾರರಾದ ಸಂದೀಪ್ ಕುಮಾರ್ ಅವರನ್ನ ತರಾಟೆಗೆ ತೆಗೆದುಕೊಂಡಿತು. ಈ ಹಿಂದೆ ಇಂತಹ ಎರಡು ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ. ಅದಾಗ್ಯೂ ನೀವು ಅರ್ಜಿ ಸಲ್ಲಿಸಿದ್ದೀರಿ. ಹೀಗಾಗಿ ನಿಮ್ಮ ಮೇಲೆ ಭಾರೀ ವೆಚ್ಚವನ್ನು ವಿಧಿಸಬೇಕು ಎಂದು ಕೋರ್ಟ್ ಹೇಳಿತು. ಇದನ್ನೂ ಓದಿ: ಕೇಂದ್ರ, ರಾಜ್ಯದ ನಡುವೆ ಸ್ಪರ್ಧೆ ಬೇಡ – ಬರ ಪರಿಹಾರ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಸಲಹೆ
Advertisement
Advertisement
ಪ್ರಚಾರ ಹಿತಾಸಕ್ತಿ ಅರ್ಜಿಯಲ್ಲದೆ ಬೇರೇನೂ ಅಲ್ಲ ಎಂದ ಪೀಠ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರ ಪೀಠವು ಇದೇ ರೀತಿಯ ವಿಷಯಗಳನ್ನು ಆಲಿಸಿದೆ ಮತ್ತು ತಿರಸ್ಕರಿಸಿದೆ. ಇದೇ ರೀತಿಯ ಅರ್ಜಿಗಳನ್ನು ಆಲಿಸಿದ್ದರಿಂದ ಅಂತಿಮವಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಈ ಅರ್ಜಿಯನ್ನು ವರ್ಗಾಯಿಸಲಾಯಿತು.
Advertisement
Advertisement
ಮಾರ್ಚ್ 28 ರಂದು, ಸುರ್ಜಿತ್ ಸಿಂಗ್ ಯಾದವ್ ಎಂಬಾತ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ತಿರಸ್ಕರಿಸಿತ್ತು. ಕಾರ್ಯಾಂಗ ಮತ್ತು ಅಧ್ಯಕ್ಷರು ಸಮಸ್ಯೆಯನ್ನು ಪರಿಶೀಲಿಸಬೇಕು ಮತ್ತು ನ್ಯಾಯಾಲಯವು ಅದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆಗ ಹೇಳಿತ್ತು. ಏಪ್ರಿಲ್ 4 ರಂದು, ಹಿಂದೂ ಸೇನೆಯ ಅಧ್ಯಕ್ಷರಾದ ವಿಷ್ಣು ಗುಪ್ತಾ ಅವರ ಮತ್ತೊಂದು ಪಿಐಎಲ್ ಅನ್ನು ಪರಿಗಣಿಸಲು ನ್ಯಾಯಾಲಯ ನಿರಾಕರಿಸಿತು. ಸಿಎಂ ಆಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಕರೆ ಎಂದು ಕೋರ್ಟ್ ಹೇಳಿತ್ತು. ಇದನ್ನೂ ಓದಿ: ಈ ಬಾರಿ ಅಯೋಧ್ಯೆಯಲ್ಲಿ ರಾಮನವಮಿ ಅದ್ಧೂರಿ ಆಚರಣೆ- ಸೂರ್ಯ ತಿಲಕಕ್ಕೆ ಸಿದ್ಧತೆ