ಕಲಬುರಗಿ/ಬೀದರ್: ರಾಜ್ಯದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಳೆಯ ಆರ್ಭಟಕ್ಕೆ ಕಲ್ಯಾಣ ಕರ್ನಾಟಕ ತತ್ತರಿಸಿದೆ. ಕಲಬುರಗಿಯಲ್ಲಿ ಭಾರೀ ಮಳೆಗೆ ಗ್ರಾಮಗಳು ಜಲಾವೃತವಾಗಿದ್ದು, ಸೇತುವೆಗಳು ನೀರಿನಿಂದ ತುಂಬಿಕೊಂಡಿವೆ.
Advertisement
ಜಿಲ್ಲೆಯ ಚಿಂಚೋಳಿ, ಸೇಡಂ ತಾಲೂಕಿನ ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿವೆ. ಕಾಗಿಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಸೇತುವೆಗಳು ಮುಳುಗಡೆಯಾಗಿವೆ. ಜಮೀನುಗಳಿಗೆ ನೀರು ನುಗ್ಗಿ ಹೆಕ್ಟೇರ್‍ಗಟ್ಟಲೆ ಬೆಳೆನಾಶವಾಗಿದೆ. ಭಾರೀ ಮಲೆಯಿಂದ ಸೇತುವೆಗಳು ಜಲಾವೃತವಾಗಿದ್ದು, ಕಲಬುರಗಿ- ಆಂಧ್ರ, ತೆಲಂಗಾಣ ಸಂಪರ್ಕ ಕಡಿತವಾಗಿದೆ. ಚಂದ್ರಪಳ್ಳಿ, ಬೆಣ್ಣೆತೋರಾ ಡ್ಯಾಂನಿಂದ ಮತ್ತೆ ನೀರು ಬಿಡುವ ಸಾಧ್ಯತೆ ಇದೆ. ಇದನ್ನೂ ಓದಿ: 2022ಜನವರಿ 1ರವರೆಗೆ ಪಟಾಕಿ ಸಿಡಿಸುವಂತಿಲ್ಲ: ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ
Advertisement
Advertisement
ಸತತ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ತೊಗರಿ, ಕಬ್ಬು ಸೇರಿದಂತೆ ಇತರೆ ಬೆಳೆಗಳು ಸಂಪೂರ್ಣ ನೀರು ಪಾಲಾಗಿವೆ. ಸೇತುವೆಗಳು ಮುಳುಗಡೆ ಜೊತೆಗೆ ಜಮೀನುಗಳಿಗೆ ನೀರು ನುಗ್ಗಿದ್ದರಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿವೆ.
Advertisement
ಬೀದರ್ ನಲ್ಲಿ ಸಹ ಗುಲಾಬ್ ಚಂಡಮಾರುತದ ಎಫೆಕ್ಟ್ ನಿಂದಾಗಿ ಭಾರೀ ಮಳೆ ಸುರಿದಿದೆ. ಭಾಲ್ಕಿ ತಾಲೂಕಿನಲ್ಲಿ ಅವಾಂತರಗಳು ಸೃಷ್ಠಿಯಾಗಿವೆ. ಇತ್ತ ಧನ್ನೆಗಾಂವ್, ಕಾರಂಜಾ ಜಲಾಶಯಗಳಿಂದ ಮತ್ತೆ ನೀರು ಬಿಡುಗಡೆ ಮಾಡಲಾಗಿದೆ. ಮಾಂಜ್ರಾ ನದಿ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ. 50 ಸಾವಿರ ರೂ.ಗೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ.