ಬೀದರ್/ಶಿವಮೊಗ್ಗ/ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆ (Heavy Rain) ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಗಡಿ ಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಒಂದು ಗಂಟೆಯಿಂದಲೂ ಬೀದರ್‌ನಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದೆ. ಈ ಮೂಲಕ ಬಿಸಿಲಿನಿಂದ ಕೆಂಗೆಟ್ಟಿದ್ದ ಜಿಲ್ಲೆಯ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಚಿಟ್ಟಗುಪ್ಪ, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೀದರ್‌ನಲ್ಲಿ ತಂಪಾದ ವಾತಾವರಣ ನಿರ್ಮಾಣವಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಇಂದಿನಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಕಲಿಸಿದ ಗುರುವಿಗೆ ಚಿನ್ನದುಂಗುರ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು

ಇನ್ನು ಶಿವಮೊಗ್ಗದಲ್ಲೂ ಸಿಡಿಲು, ಗುಡುಗಿನ ಜೊತೆ ಮಳೆ ಆರಂಭವಾಗಿದೆ. ಶಿವಮೊಗ್ಗ ನಗರ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದೆ. ಬಿರು ಬಿಸಿಲಿನಿಂದ ಕಾದಿದ್ದ ಶಿವಮೊಗ್ಗವನ್ನ ಮಳೆರಾಯ ತಣ್ಣಗಾಗಿಸಿದ್ದಾನೆ. ಕಳೆದ ಅರ್ಧ ಗಂಟೆಯಿಂದ ಜೋರು ಮಳೆಯಾಗುತ್ತಿದೆ. ಭಾರೀ ಮಳೆಗೆ ಶಿವಮೊಗ್ಗ ಕೂಲ್ ಕೂಲ್ ಆಗಿದೆ. ಇದನ್ನೂ ಓದಿ: Twisha Sharma Case: ಪತಿ, ಅತ್ತೆಯನ್ನು ಮನೆಗೆ ಕರೆತಂದು ಅಪರಾಧ ದೃಶ್ಯ ಮರುಸೃಷ್ಟಿ ಮಾಡಿದ ಸಿಬಿಐ
ದಾಂಡೇಲಿಯಲ್ಲೂ ಗಾಳಿ-ಮಳೆಯ ಅಬ್ಬರ ಹೆಚ್ಚಾಗಿದ್ದು, ನಗರದ ಹಲವು ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿದೆ. ಭಾರೀ ಗಾಳಿಗೆ ಅಂಗಡಿಗಳ ಬೋರ್ಡ್‌ಗಳು ಹಾರಿ ಹೋಗಿ ಹಾನಿಯಾಗಿದೆ. ಅಂಗಡಿಗಳಿಗೆ ಮಳೆ ನೀರು ನುಗ್ಗಿ ವ್ಯಾಪಾರಿಗಳಿಗೆ ತೊಂದರೆಯುಂಟಾಗಿದೆ. ರಸ್ತೆಗಳ ಮೇಲೆ ಮರದ ಕೊಂಬೆಗಳು, ಗಿಡಗಂಟೆಗಳು ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ. ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಆಸ್ಪತ್ರೆ ಮುಂಭಾಗಕ್ಕೂ ಮಳೆ ನೀರು ನುಗ್ಗಿದೆ. ಭಾರೀ ಮಳೆಯಿಂದಾಗಿ ಕೆಲಕಾಲ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡಿದ್ದಾರೆ. ಇದನ್ನೂ ಓದಿ: ಪತಿ ಮೇಲೆ ಪತ್ನಿ ಆಸಿಡ್ ಅಟ್ಯಾಕ್ – ಮಹಿಳೆಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
