ರಾಯಚೂರು: ಜಿಲ್ಲೆಯ ಮಸ್ಕಿ (Maski) ತಾಲೂಕಿನಲ್ಲಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ (Heavy Rain) ಭತ್ತದ ಬೆಳೆ ಹಾನಿಯಾಗಿದೆ. ಕಟಾವಿಗೆ ಬಂದಿದ್ದ ಭತ್ತದ ಬೆಳೆ ಮಕಾಡೆ ಮಲಗಿದ್ದು ರೈತರಿಗೆ ಸಂಕಷ್ಟ ಎದುರಾಗಿದೆ.
ಕೆಲವೆಡೆ ಗದ್ದೆಯಲ್ಲಿ ನೀರು ನಿಂತು ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಆಲಿಕಲ್ಲು ಮಳೆಗೆ ಗೌಡನಬಾವಿ, ಸಾಗರ ಕ್ಯಾಂಪ್, ಬೆಳ್ಳಿಗನೂರು ಗ್ರಾಮದಲ್ಲಿ ಬೆಳೆ ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಅಂತ ರೈತರು ಅಳಲು ತೋಡಿಕೊಂಡಿದ್ದಾರೆ. ಒಣಗಿರುವ ಭತ್ತದ (Paddy) ಕಾಳು ನೆಲಕ್ಕೆ ಬಿದ್ದು ಮೊಳಕೆ ಒಡೆಯುವ ಆತಂಕ ಎದುರಾಗಿದೆ. ಇದನ್ನೂ ಓದಿ: ವಾಟ್ಸಪ್ ಫೋಟೋ ಡೌನ್‌ಲೋಡ್ ಮಾಡೋ ಮುನ್ನ ಎಚ್ಚರವಾಗಿರಿ – ನಿಮ್ಮ ಫೋನ್ ಹ್ಯಾಕ್ ಆಗಬಹುದು!
ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ
ಇನ್ನೂ ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮಿ ವೇಗದಲ್ಲಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು (ಏ.12), ನಾಳೆ ಹಗುರ ಮಳೆಯಾಗಲಿದೆ. ನಗರದ ಕೆಲವೆಡೆ ಮೋಡಕವಿದ ವಾತಾವರಣ ಇದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: APMCಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ ಆರೋಪ; ʻಕೈʼ ಸರ್ಕಾರದ ವಿರುದ್ಧ ಮತ್ತೊಂದು ಕಮೀಷನ್ ಬಾಂಬ್!
ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಮದುವೆಯಾಗಲು ಬಂದ ಪ್ರೇಮಿಗಳಿಗೆ ಗೂಸಾ – ರಕ್ತ ಸುರಿಯುತ್ತಿದ್ದರೂ ಪ್ರಿಯಕರನತ್ತ ಕೈ ಸನ್ನೆ ಮಾಡಿದ ಯುವತಿ