– ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮತ್ತಷ್ಟು ಚುರುಕುಗೊಂಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಕ್ಕೆ ಭಾರೀ ಮಳೆ ಅಲರ್ಟ್ ಘೋಷಿಸಲಾಗಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ ಪುನರಾರಂಭದ ಮೊದಲ ಪಂದ್ಯ ಆರ್‌ಸಿಬಿ ವರ್ಸಸ್ ಕೆಕೆಆರ್ ತಂಡದ ನಡುವೆ ನಡೆಯಲಿದೆ. ಮಳೆ ಅಲರ್ಟ್ (Rain Alert) ಹಿನ್ನೆಲೆ ಐಪಿಎಲ್‌ಗೂ (IPL 2025) ಅಡ್ಡಿಪಡಿಸುವ ಸಾಧ್ಯತೆ ಇದೆ. ಭಾನುವಾರ ಹಾಗೂ ಸೋಮವಾರ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿ | ಕೃಷಿಹೊಂಡದಲ್ಲಿ ಬಿದ್ದು ಬಾಲಕ ಸಾವು
ಮೇ 17 ಹಾಗೂ ಮೇ 18ರಂದು ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಪುಣೆಯ ಐಸಿಸ್ ಮಾಡ್ಯೂಲ್ ಕೇಸ್ – ಇಬ್ಬರು ಉಗ್ರರ ಬಂಧನ