ರಾಯಚೂರು: ಮಹಾರಾಷ್ಟ್ರದಲ್ಲಿ ಅತಿಯಾದ ಮಳೆ ಹಿನ್ನೆಲೆ ಬಸವಸಾಗರ ಜಲಾಶಯ ಬಹುತೇಕ ಭರ್ತಿಯಾಗಿದೆ. 492.25 ಮೀಟರ್ ಎತ್ತರದ ಜಲಾಶಯದಲ್ಲಿ 491.03 ಮೀಟರ್ ನೀರು ಸಂಗ್ರಹವಾಗಿದೆ. ಹೀಗಾಗಿ 10,000 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡಲು ಅಧಿಕಾರಿಗಳ ನಿರ್ಧಾರ ಮಾಡಿದ್ದಾರೆ.
ಸದ್ಯ 3,892 ಕ್ಯೂಸೆಕ್ ಒಳಹರಿವು ಇದ್ದು, ಯಾವ ಸಂದರ್ಭದಲ್ಲಿ ಬೇಕಾದರೂ ಜಲಾಶಯದಿಂದ ನೀರನ್ನು ಬಿಟ್ಟು ಹೊರಹರಿವು ಹೆಚ್ಚಿಸುವ ಸಾಧ್ಯತೆ. ಹೀಗಾಗಿ ಲಿಂಗಸುಗೂರು ಹಾಗೂ ರಾಯಚೂರು ತಾಲೂಕಿನ ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ಸಂದೇಶ ನೀಡಿದೆ. ಇದನ್ನೂ ಓದಿ: ಗೋವಾದಲ್ಲೂ ಆಪರೇಷನ್‍ಗೆ ಮುಂದಾಗಿದ್ಯಾ ಬಿಜೆಪಿ..? – ಕಾಂಗ್ರೆಸ್ ಶಾಸಕರಿಗೆ 40 ಕೋಟಿ ಆಫರ್
Advertisement
Advertisement
ಮೈಕ್‍ಗಳಲ್ಲಿ ಡಂಗೂರ ಸಾರುವ ಮೂಲಕ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ನದಿ ದಡಕ್ಕೆ ತೆರಳದಂತೆ, ಜಾನುವಾರು ಬಿಡದಂತೆ ಎಚ್ಚರಿಕೆ ನೀಡಲಾಗುತ್ತಿದೆ. ಪ್ರವಾಹ ಸಮಯಲ್ಲಿ ನೀರನ್ನು ಕಾಯಿಸಿ, ಆರಿಸಿ, ಸೋಸಿ ಕುಡಿಯುವಂತೆ ಮನವಿ ಮಾಡಲಾಗಿದೆ. ಇದನ್ನೂ ಓದಿ: ಕೆನಡಾ ಸಂಸದ ಚಂದ್ರ ಆರ್ಯ ಹುಟ್ಟೂರು ತುಮಕೂರಿಗೆ ಭೇಟಿ