ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿದಿದೆ. ಅದರಲ್ಲೂ ಮಡಿಕೇರಿ (Madikeri) ತಾಲ್ಲೂಕಿನ ಹಲವು ಭಾಗಗಳಲ್ಲಿ ಬೆಳಗ್ಗಿನಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ.
ಮಡಿಕೇರಿ ಸುತ್ತಮುತ್ತಲಿನ ಮೂರ್ನಾಡು, ಗಾಳಿಬೀಡು, ಸೋಮವಾರಪೇಟೆ, ಸುಂಟಿಕೊಪ್ಪ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಬೆಳಗ್ಗಿನಿಂದಲೂ ಬಿಡುವು ನೀಡದೆ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು ಒದ್ದೆಯಾಗಿದ್ದು, ವಾಹನ ಸವಾರರು ಸಂಚಾರಕ್ಕೆ ಪರದಾಡುವಂತಾಗಿದೆ.
ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವ ಸಾರ್ವಜನಿಕರು ಕೂಡ ಮಳೆಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಕೊಡಗಿನ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಮುಂದಿನ ಕೆಲಕಾಲವೂ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವ ಅಗತ್ಯವಿದೆ.ಇದನ್ನೂ ಓದಿ: ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಡಿಕೆಶಿ ಪುತ್ರ ಆಕಾಶ್
