ಕೊಡಗು/ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆ ಬೀಳುತ್ತಿರುವುದಿಂದ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಉಡುಪಿಯಲ್ಲಿ ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆ ಮಾಡುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಕ್ಕಳು ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡುವ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯಾದ ಶ್ರೀವಿದ್ಯಾ ರವರು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
Advertisement
Advertisement
ಉಡುಪಿಯಲ್ಲೂ ಮಳೆ ತನ್ನ ಆರ್ಭಟ ಮುಂದುವರೆಸಿದ್ದು, ಕಳೆದೊಂದು ದಿನದಿಂದ ಮಳೆ ಮುಂದುವರೆಯುತ್ತಲೇ ಇದೆ. ಜಿಲ್ಲೆಯ ಕಾಪು, ಬೈಂದೂರು ಹಾಗೂ ಹೆಬ್ರಿ ತಾಲೂಕಿನಾದ್ಯಂತ ವರ್ಷಧಾರೆ ವ್ಯಾಪಕವಾಗಿ ಮುಂದುವರೆದಿದೆ. ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜಾ ಎನ್ನುವ ಸುದ್ದಿ ವಾಟ್ಸಪ್ ನಲ್ಲಿ ಹರಿದಾಡಿದ್ದರಿಂದ ಪೋಷಕರು ಗೊಂದಲಕ್ಕೊಳಗಾಗಿದ್ದರು. ಈ ಕುರಿತು ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿಯಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್‍ರವರು ಉಡಿಪಿ ಜಿಲ್ಲೆಯಾದ್ಯಂತ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದು ತಿಳಿಸಿದ್ದಾರೆ.
Advertisement
ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆ ಮಾಡುವಂತೆ ತಾಲೂಕು ಬಿಇಓ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಸಾರ್ವಜನಿಕರು ಅನಗತ್ಯ ಗೊಂದಲಕ್ಕೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.