ಬಳ್ಳಾರಿ: ಭೀಕರ ಬರಗಾಲದಿಂದ ತತ್ತರಿಸಿದ್ದ ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ರಾತ್ರಿ ಭಾರಿ ಮಳೆ ಸುರಿದಿದೆ. ಅದರಲ್ಲೂ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಾದ ಪರಿಣಾಮ ಸಾಕಷ್ಟು ಅನಾಹುತ ಸಹ ಸಂಭವಿಸಿದೆ.
ಭಾನುವಾರ ರಾತ್ರಿ ಭಾರಿ ಮಳೆ ಸುರಿದ ಪರಿಣಾಮ ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಕಲ್ ಗ್ರಾಮದ ಸೋಮೇಶ್ವರ ಕೆರೆ ತುಂಬಿ ಕೋಡಿ ಬಿದ್ದಿದೆ. ಅಷ್ಟೆ ಅಲ್ಲ ನೀರಿನ ಪ್ರಮಾಣ ಹೆಚ್ಚಾದ ಹಿನ್ನಲೆಯಲ್ಲಿ ಕೆರೆಯ ಗೋಡೆ ಒಡೆದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿದೆ.
ಕೆರೆ ನೀರು ರೈತರ ಜಮೀನುಗಳಿಗೆ ನುಗ್ಗಿದ ಪರಿಣಾಮ ನೂರಾರು ಎಕರೆ ಬೆಳೆ ಬೆಳೆ ಹಾನಿಯಾಗಿದೆ. ಹೀಗಾಗಿ ರೈತರು ಮತ್ತೆ ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.