ಮೈಸೂರು: ಕಳೆದು ಎರಡು ದಿನದಿಂದ ವರ್ಷದ ಮಳೆ ಆರಂಭವಾಗಿದ್ದು, ಭಾನುವಾರ ಸಂಜೆ ಮೈಸೂರು ಮತ್ತು ನೆಲಮಂಗಲದಲ್ಲಿ ಬಿರುಗಾಳಿ ಸಹಿತ ವರುಣನ ಆರ್ಭಟವಾಗಿದೆ.
ಇತ್ತೀಚೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲೂ ಹದವಾದ ಮಳೆಯಾಗಿತ್ತು. ಈಗ ಮೈಸೂರಿನಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಭೂಮಿಗೆ ವರುಣ ತಂಪೆರೆದಿದ್ದಾನೆ. ಮೊದಲ ಮಳೆಗೆ ಮೈಸೂರಿಗರು ಹರ್ಷಿತರಾಗಿದ್ದಾರೆ. ಆದರೆ ವರ್ಷದ ಮೊದಲ ಮಳೆಗೆ ಮರ ಧರೆಗುರುಳಿದಿದ್ದು, ಕಾರು ಜಖಂ ಆಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಗುಡುಗು ಸಹಿತ ಭಾರೀ ಮಳೆ- ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ
Advertisement
Advertisement
ಮಳೆ ಗಾಳಿಯ ಅಬ್ಬರಕ್ಕೆ ಧರೆಗೆ ಶಂಕರ ಮಠದ ಮುಂಭಾಗದ ರಸ್ತೆಯಲ್ಲಿ ಮಾವಿನ ಮರ ಧರೆಗುರುಳಿದ ಪರಿಣಾಮ ಕಾರು ಜಖಂ ಆಗಿದ್ದು, ವಿದ್ಯುತ್ ಸಂಪರ್ಕವೂ ಕಡಿತಗೊಂಡಿತ್ತು. ಇತ್ತ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಮುದ್ದಲಿಂಗನಹಳ್ಳಿ ಭಾಗದಲ್ಲಿ ಅಕಾಲಿಕ ಮಳೆಯಾಗಿದ್ದು, ಬಿರುಗಾಳಿ ಸಹಿತ ವರುಣನ ಆರ್ಭಟ ಮಾಡಿದ್ದಾನೆ. ಅಕಾಲಿಕ ಮಳೆ ದ್ವಿಚಕ್ರ ವಾಹನ ಸವಾರರ ಪರದಾಡುವ ಪರಿಸ್ಥಿತಿ ಉಂಟಾಗಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv