– ಬೆಳೆ ಹಾನಿ ಜಂಟಿ ಸರ್ವೆ ಕಾರ್ಯಕ್ಕೆ ಡಿಸಿ ಆದೇಶ
ಕೋಲಾರ: ಜಿಲ್ಲೆಯಲ್ಲಿ ಎರಡು ದಿನದಿಂದ ಆಲಿಕಲ್ಲು ಸಹಿತ ಬಾರಿ ಮಳೆಯಾಗುತ್ತಿದೆ. ಕಳೆದ ದಿನ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದಾಗಿ ಟೊಮೆಟೊ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದೆ.
ಬಂಗಾರಪೇಟೆ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಸೊಣ್ಣೇಗೌಡ ಎಂಬವರ ಲಕ್ಷಾಂತರ ಮೌಲ್ಯದ ಟೊಮೆಟೊ ಬೆಳೆ ಹಾನಿಯಾಗಿದೆ. ಐತಾಂಡಹಳ್ಳಿ ಗ್ರಾಮದ ಮುನಿರಾಜು ಸೇರಿದಂತೆ ಬಂಗಾರಪೇಟೆ ತಾಲೂಕಿನ ವಿವಿಧೆಡೆ ಲಕ್ಷಾಂತರ ರೂಪಾಯಿಯ ನೂರಾರು ಎಕರೆ ಬೆಳೆ ನಾಶವಾಗಿದೆ.
Advertisement
Advertisement
ಕೋಲಾರ, ಬಂಗಾರಪೇಟೆ, ಮುಳಬಾಗಿಲು, ಕೆಜಿಎಫ್ ಸೇರಿದಂತೆ ವಿವಿಧೆಡೆ ಬುಧವಾರ ರಾತ್ರಿ ಸುರಿದ ಮಳೆಗೆ ಟೊಮೆಟೊ ಸೇರಿದಂತೆ ಇನ್ನಿತರ ಬೆಳೆಗಳು ಹಾನಿಗೊಳಗಾಗಿವೆ. ಕೆಲ ದಿನಗಳಿಂದ ಕೊರೊನಾ ಲಾಕ್‍ಡೌನ್‍ನಿಂದಾಗಿ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ, ತೋಟದಲ್ಲಿಯೇ ಕೊಳೆಯುವ ಪರಿಸ್ಥಿತಿ ಎದುರಾಗಿತ್ತು. ಜೊತೆಗೆ ಇದರಿಂದ ಸರಿಯಾದ ಬೆಲೆ ಸಿಗದೆ ಜಿಲ್ಲೆಯ ರೈತರು ನಷ್ಟ ಅನುಭವಿಸಿದ್ದರು.
Advertisement
ಕೊರೊನಾ ಲಾಕ್‍ಡೌನ್ ನಡುವೆಯೇ ಎರಡು ದಿನದಿಂದ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಇದರಿಂದ ರೈತರು ಬೆಳೆದ ಬೆಳೆಗಳು ಹಾನಿಯಾಗಿದೆ. ಎಷ್ಟೆಲ್ಲಾ ಬೆಳೆ ಹಾನಿಯಾಗಿದೆ ಎಂಬುದರ ಮಾಹಿತಿಯನ್ನ ಪಡೆಯಲು ಈಗಾಗಲೇ ಆಯಾ ತಾಲೂಕಿನ ತಹಶೀಲ್ದಾರ್, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಂಟಿ ಸರ್ವೇ ಕಾರ್ಯ ಮಾಡಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಸತ್ಯಭಾಮ ಹೇಳಿದರು.
Advertisement