ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಇದನ್ನೂ ಓದಿ: ದೇಶದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಸಂಚು – ನಾಲ್ವರು ಐಸಿಸ್ ಕಾರ್ಯಕರ್ತರಿಗೆ ಜೈಲು ಶಿಕ್ಷೆ
ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಬಳ್ಳಾರಿ, ವಿಜಯನಗರ, ಗದಗ, ಕೊಪ್ಪಳ, ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.
ಮುಂದಿನ ಮೂರು ಗಂಟೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ರಾತ್ರಿಯಿಂದ ಬಿಟ್ಟೂಬಿಡದೇ ಸುರಿಯುತ್ತಿರುವ ಮಳೆ – ವಾಹನ ಸವಾರರ ಪರದಾಟ

