ಬೆಂಗಳೂರು: ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಬೆಂಗಳೂರಿನಲ್ಲಿ (Bengaluru) ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದಿ, ನಗರದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಸಾವು
ಕರಾವಳಿ ಭಾಗದಲ್ಲಿ ಗಂಟೆಗೆ 35-55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ರಾಜ್ಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದನ್ನೂ ಓದಿ: ಬೆಂಗಳೂರು: 22 ದಿನಗಳಲ್ಲಿ ದೋಷಪೂರಿತ ನಂಬರ್ ಪ್ಲೇಟ್ ಇದ್ದ 9,684 ವಾಹನಗಳ ಮೇಲೆ ಕೇಸ್