ಬೆಂಗಳೂರು: ಬಂಗಾಳಕೊಲ್ಲಿ (Bay Of Bengal) ಹಾಗೂ ಅರಬ್ಬಿ ಸಮುದ್ರ (Arabian Sea) ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾರೀ ಮಳೆ ಹಿನ್ನೆಲೆ ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ, ನನಗೂ ಕೊಲೆಗೂ ಯಾವುದೇ ಸಂಬಂಧವಿಲ್ಲ: ಬೈರತಿ ಬಸವರಾಜ್
ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲೂ ಜೋರು ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ತಪ್ಪಿತು ದೊಡ್ಡ ದುರಂತ – ಮತ್ತೆ ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್